BREAKING: ತಾಂತ್ರಿಕ ದೋಷದಿಂದ ಐಎಎಫ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ನವದೆಹಲಿ: ಭಾರತೀಯ ವಾಯುಪಡೆಯ(ಐಎಎಫ್) ಹೆಲಿಕಾಪ್ಟರ್ ಬುಧವಾರ ತಾಂತ್ರಿಕ ದೋಷಕ್ಕೆ ತುತ್ತಾಗಿ ರಾಜಸ್ಥಾನದ ನಾಗೌರ್‌ನ ಮೆರ್ಟಾ ಪ್ರದೇಶದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾಸ್‌ ನಗರದ ಜಮೀನಿನಲ್ಲಿ ಹೆಲಿಕಾಪ್ಟರ್ ಇಳಿಯಿತು. ಯಾವುದೇ ಪ್ರಾಣ ಹಾನಿ ವರದಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಎರಡು ಐಎಎಫ್ ಹೆಲಿಕಾಪ್ಟರ್‌ಗಳು ಜೋಧ್‌ಪುರದಿಂದ ಜೈಪುರಕ್ಕೆ ಹೋಗುತ್ತಿದ್ದಾಗ ಪೈಲಟ್‌ ಗಳಲ್ಲಿ ಒಬ್ಬರು ಕೆಲವು ಸಮಸ್ಯೆಗಳನ್ನು ಗಮನಿಸಿದರು, ಇದರಿಂದಾಗಿ ಹೆಲಿಕಾಪ್ಟರ್ ಲ್ಯಾಂಡ್ ಆಗಬೇಕಾಯಿತು.

ಸಮಸ್ಯೆಯನ್ನು ಸರಿಪಡಿಸಿದ ನಂತರ, ಹೆಲಿಕಾಪ್ಟರ್ ಮತ್ತೆ ಟೇಕ್ ಆಫ್ ಆಗಿದೆ. ಭಾರತೀಯ ವಾಯುಪಡೆಯ ತಜ್ಞ ತಂಡ ಸ್ಥಳಕ್ಕೆ ಆಗಮಿಸಿ ಹೆಲಿಕಾಪ್ಟರ್‌ನಲ್ಲಿನ ತಾಂತ್ರಿಕ ದೋಷವನ್ನು ಸರಿಪಡಿಸಿದೆ ಎಂದು ಮೆರ್ಟಾ ಡಿಎಸ್ಪಿ ರಾಮಕರನ್ ಮಲಿಂದಾ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read