ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಭಾರತೀಯ ವಾಯುಪಡೆ (IAF) ತಿಳಿಸಿದೆ.
ಈ ಬಗ್ಗೆ ಅಧಿಕೃತವಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಭಾರತೀಯ ವಾಯುಪಡೆ, ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮುಂದುವರೆದಿರುವುದರಿಂದ ಸೂಕ್ತ ಸಮಯದಲ್ಲಿ ವಿವರವಾದ ಮಾಹಿತಿ ಹಂಚಿಕೊಳ್ಳಲಾಗುವುದು. ಊಹಾಪೋಹ ಸುದ್ದಿಗಳನ್ನು ನಂಬಬೇಡಿ ಎಂದು ತಿಳಿಸಿದೆ.
ಭಾರತೀಯ ವಾಯುಪಡೆ ಆಪರೇಷನ್ ಸಿಂಧೂರ್ ಅಡಿಯಲ್ಲಿ ನಿಯೋಜಿಸಲಾದ ಕಾರ್ಯವನ್ನು ಅತ್ಯಂತ ನಿಖರತೆ ಮತ್ತು ವೃತ್ತಿಪರತೆಯಿಂದ ಯಶಸ್ವಿಯಾಗಿ ನಿರ್ವಹಿಸಿದೆ. ಈ ಕಾರ್ಯಾಚರಣೆಯನ್ನು ರಾಷ್ಟ್ರೀಯ ಉದ್ದೇಶಗಳಿಗೆ ಅನುಗುಣವಾಗಿ ಯೋಜಿತ ಮತ್ತು ರಹಸ್ಯ ರೀತಿಯಲ್ಲಿ ನಡೆಸಲಾಯಿತು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.