IAS ಅಧಿಕಾರಿ ವಿರುದ್ಧ ವರದಕ್ಷಿಣೆ ಕಿರುಕುಳದ ಕೇಸ್

ಐಎಎಸ್ ಅಧಿಕಾರಿಯೊಬ್ಬರ ವಿರುದ್ಧ ಅವರ ಪತ್ನಿ ವರದಕ್ಷಿಣೆ ಕಿರುಕುಳದ ದೂರು ದಾಖಲಿಸಿದ್ದು, ಈ ಸಂಬಂಧ ಬೆಂಗಳೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿರುವ ಡಾ. ಆಕಾಶ್ ಶಂಕರ್ ವಿರುದ್ಧ ಪತ್ನಿ ಡಾ. ಎಸ್. ವಂದನಾ ಬೆಂಗಳೂರು ಪೂರ್ವ ವಿಭಾಗದ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಪ್ರಕರಣದಲ್ಲಿ ಡಾ. ಆಕಾಶ್, ಅವರ ತಂದೆ, ತಾಯಿ, ಸಹೋದರನ ವಿರುದ್ಧವೂ ದೂರು ದಾಖಲಾಗಿದ್ದು, ವಿವಾಹ ಸಂದರ್ಭದಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಆಭರಣಗಳನ್ನು ಉಡುಗೊರೆಯಾಗಿ ನೀಡಿದ್ದರೂ ಸಹ ಬೆಂಗಳೂರಿನಲ್ಲಿ ಮನೆ ಕೊಡಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಇಟ್ಟು ನನಗೆ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ವಂದನಾ ಆರೋಪಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read