ʻIAS, KAS, ಬ್ಯಾಂಕಿಂಗ್ʼ ತರಬೇತಿಗೆ ಪರೀಕ್ಷೆ : ಅಭ್ಯರ್ಥಿಗಳ ಪ್ರವೇಶ ಪತ್ರ ಬಿಡುಗಡೆ

ಬೆಂಗಳೂರು : ಹಿಂದುಳಿದ ವರ್ಗಗಳ ಇಲಾಖೆ / ಸಮಾಜ ಕಲ್ಯಾಣ ಇಲಾಖೆ ರವರು ಐಎಎಸ್/ಕೆಎಎಸ್/ಬ್ಯಾಂಕಿಂಗ್‌ ಗೆ ಸಂಬಂಧಿಸಿದಂತೆ ಪರೀಕ್ಷೆಗಳನ್ನು ಬರೆಯಲು ಇಚ್ಚಿಸುವ ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಿದ್ದು, ಈ ಪ್ರವೇಶ ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ  ಮಾಡಿದೆ.

ದಿನಾಂಕ. 18.02.2024ರಂದು ಪರೀಕ್ಷೆ ನಡೆಸಲಾಗುತ್ತಿದೆ. ಈ ಪರೀಕ್ಷೆಗಳ ಪ್ರವೇಶ ಪತ್ರಗಳನ್ನು ಅಭ್ಯರ್ಥಿಗಳು ಹೆಸರು / ಜನ್ಮದಿನಾಂಕ/ ಅರ್ಜಿ ಸಂಖ್ಯೆ/ಮೊಬೈಲ್ ಸಂಖ್ಯೆ ಬಳಸಿ ಪ್ರಾಧಿಕಾರದ ವೆಬ್‌ಸೈಟಿನಿಂದ ಡೌನ್‌ಲೋಡ್ ಮಾಡಬಹುದಾಗಿದೆ.

ಪ್ರಾಧಿಕಾರವು ಕೆಪಿಸಿಎಲ್ ಸಂಸ್ಥೆಗೆ ಸಂಬಂಧಿಸಿದಂತೆ ಮರುಪರೀಕ್ಷೆಯನ್ನು ದಿನಾಂಕ 18.02.2024 ಹಾಗೂ ಕನ್ನಡ ಭಾಷೆ ಪರೀಕ್ಷೆಯನ್ನು ದಿನಾಂಕ 19.02.2024ರಂದು ನಡೆಸುತ್ತಿದ್ದು ಹಾಗೂ ಕೆಎಸ್‌ಎಫ್‌ಸಿ ಯಲ್ಲಿರುವ ಖಾಲಿ ಹುದ್ದೆಗಳಿಗೂ ಸಹ ನೇಮಕಾತಿಗಾಗಿ ಪರೀಕ್ಷೆಗಳನ್ನು ದಿನಾಂಕ 17.02.2024ರಂದು ನಡೆಸುತ್ತಿದ್ದು, ಈ ಎಲ್ಲಾ ಪರೀಕ್ಷೆಗಳಿಗೆ ಅಭ್ಯರ್ಥಿಗಳು ಹೆಸರು / ಜನ್ಮದಿನಾಂಕ/ ಅರ್ಜಿ ಸಂಖ್ಯೆ/ಮೊಬೈಲ್ ಸಂಖ್ಯೆ ಬಳಸಿ ಪ್ರಾಧಿಕಾರದ ವೆಬ್‌ಸೈಟಿನಿಂದ ಡೌನ್‌ಲೋಡ್ ಮಾಡಬಹುದಾಗಿದೆ.

ಪರೀಕ್ಷೆಯ ಹಿಂದಿನ ದಿನಾಂಕದವರೆಗೆ ಕಾಯದೆ ಕೂಡಲೇ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಲು ತಿಳಿಸಿದೆ. ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಸಾಧ್ಯವಾಗದ ಪಕ್ಷದಲ್ಲಿ keauthority-ka@nic.in ಇ-ಮೇಲ್ ಕಳುಹಿಸಲು ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read