HomeKarnatakaBREAKING : ಇಂದು ವಿಚಾರಣೆಗೆ ಹಾಜರಾಗುವಂತೆ 'IAS' ಅಧಿಕಾರಿ ಜ್ಞಾನೇಂದ್ರ ಕುಮಾರ್ ಗೆ ಮತ್ತೆ CID...

BREAKING : ಇಂದು ವಿಚಾರಣೆಗೆ ಹಾಜರಾಗುವಂತೆ ‘IAS’ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗೆ ಮತ್ತೆ CID ನೋಟಿಸ್

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ನಡೆದಿರುವ ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರಿಗೆ ಸಿಐಡಿ (CID) ಮತ್ತೊಮ್ಮೆ ನೋಟಿಸ್‌ ಜಾರಿ ಮಾಡಿದೆ. ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದಾರೆ.

ನಿನ್ನೆ ನೋಟಿಸ್ ನೀಡಿ ವಿಚಾರಣೆಗೆ ಕರೆಸಿಕೊಂಡಿದ್ದ ಸಿಐಡಿ ಇಂದು ಮತ್ತೆ ಹಾಜರಾಗುವಂತೆ ಜ್ಞಾನೇಂದ್ರ ಕುಮಾರ್ ಅವರಿಗೆ ಸಿಐಡಿ ನೋಟಿಸ್‌ ನೀಡಿದೆ. ನಿನ್ನೆ ರಾತ್ರಿವರೆಗೆ ಜ್ಞಾನೇಂದ್ರ ಕುಮಾರ್ ಅವರನ್ನು ಸಿಐಡಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದರು. ಇದೀಗ ಮತ್ತೊಮ್ಮೆ ನೋಟಿಸ್‌ ನೀಡಿ, ಇಂದು ವಿಚಾರಣೆಗೆ ಹಾಜರಾಗಿ ತನಿಖಾಧಿಕಾರಿಗಳ ಮುಂದೆ ಅಗತ್ಯ ಮಾಹಿತಿಯನ್ನು ನೀಡುವಂತೆ ಸೂಚಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಇತರ ವಿಚಾರಗಳ ಕುರಿತು ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸುವ ಸಾಧ್ಯತೆ ಇದೆ. ತನಿಖೆಯ ಭಾಗವಾಗಿ ಅಧಿಕಾರಿಯಿಂದ ಅಗತ್ಯ ಮಾಹಿತಿ ಹಾಗೂ ಸ್ಪಷ್ಟೀಕರಣ ಪಡೆಯಲು ಸಿಐಡಿ ಮುಂದಾಗಿದೆ.ಪ್ರಕರಣದ ತನಿಖೆ ಮುಂದುವರಿದಿದ್ದು, ವಿಚಾರಣೆಯ ಬಳಿಕ ಮತ್ತಷ್ಟು ಮಾಹಿತಿ ಹೊರಬೀಳುವ ಸಾಧ್ಯತೆಯಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ನಡೆದಿರುವ ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರು ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ. ಈ ಪ್ರಕರಣದ ತನಿಖೆಯ ಭಾಗವಾಗಿ ಸಿಐಡಿ ಅಧಿಕಾರಿಗಳು ಜ್ಞಾನೇಂದ್ರ ಕುಮಾರ್ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ಆರೋಪಗಳ ಹಿನ್ನೆಲೆಯಲ್ಲಿ ಸಿಐಡಿ ತನಿಖೆ ಮುಂದುವರಿಸಿದೆ. ಈ ಸಂಬಂಧ ಕೆಪಿಎಸ್‌ಸಿ ಕಚೇರಿಯಲ್ಲಿಯೂ ತನಿಖಾ ಚಟುವಟಿಕೆಗಳು ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ನೇಮಕಾತಿ ಪ್ರಕ್ರಿಯೆಯ ವಿವಿಧ ಹಂತಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. . ವಿಚಾರಣೆಯಲ್ಲಿ ನೇಮಕಾತಿ ಪ್ರಕ್ರಿಯೆ, ಅಕ್ರಮಕ್ಕೆ ಸಂಬಂಧಿಸಿದ ಆರೋಪಗಳು ಹಾಗೂ ಸಂಬಂಧಿತ ದಾಖಲೆಗಳ ಕುರಿತು ಅಧಿಕಾರಿಗಳು ಪ್ರಶ್ನಿಸುವ ಸಾಧ್ಯತೆಯಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular