HomeKarnatakaBREAKING : ಬೆಂಗಳೂರಿನಲ್ಲಿ 'IAS' ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆ

BREAKING : ಬೆಂಗಳೂರಿನಲ್ಲಿ ‘IAS’ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆ

ಬೆಂಗಳೂರು: ನಗರದಲ್ಲಿ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆಯಾಗಿದ್ದು, ಅವರ ಪತ್ತೆಗೆ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಜ್ಞಾನೇಂದ್ರ ಕುಮಾರ್ ಮೊಬೈಲ್ ಬೆಂಗಳೂರಿನ ಏರ್‌ಪೋರ್ಟ್‌ನಲ್ಲಿ ಸ್ವಿಚ್‌ಆಫ್ ಆಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ನಾಪತ್ತೆಯಾಗಿರುವ ಅಧಿಕಾರಿಯ ಪತ್ತೆಗೆ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಈ ಮನವಿ ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದು, ಅಧಿಕಾರಿಯ ಚಲನವಲನವನ್ನು ಏರ್‌ಪೋರ್ಟ್‌ವರೆಗೆ ಟ್ರ್ಯಾಕ್ ಮಾಡಿದ್ದಾರೆ.

ಏರ್‌ಪೋರ್ಟ್‌ನಲ್ಲಿ ಮೊಬೈಲ್ ಸ್ವಿಚ್‌ಆಫ್ ಮಾಡಿರುವ ಅಧಿಕಾರಿ ದೆಹಲಿ ಕಡೆ ಪ್ರಯಾಣ ಬೆಳೆಸಿರುವ ಸಾಧ್ಯತೆ ಇದೆ ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಅವರು ಏಕೆ ನಾಪತ್ತೆಯಾಗಿದ್ದಾರೆ ಹಾಗೂ ದೆಹಲಿಗೆ ತೆರಳಿರುವುದಕ್ಕೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿಂದೆ KPSC ಯಲ್ಲಿ ಕೆಲಸ

ಅಧಿಕಾರಿ ಕುಟುಂಬದವರ ಸಂಪರ್ಕಕ್ಕೂ ಸಿಗುತ್ತಿಲ್ಲ ಎಂದು ವರದಿಯಾಗಿದೆ. ಈ ಹಿಂದೆ ಅವರು ಕರ್ನಾಟಕ ಲೋಕಸೇವಾ ಆಯೋಗ (KPSC)ನಲ್ಲಿ ಕೆಲಸ ಮಾಡಿದ್ದರು ಎನ್ನಲಾಗಿದೆ. ಇತ್ತೀಚೆಗೆ ನಡೆದ ED ದಾಳಿಯ ಬಳಿಕ ಅಧಿಕಾರಿ ನಾಪತ್ತೆಯಾಗಿರುವುದು ಮತ್ತಷ್ಟು ಅನುಮಾನಕ್ಕೆ ಕಾರಣವಾಗಿದೆ.

ಸದ್ಯ ಪೊಲೀಸರು ಅಧಿಕಾರಿಯ ಪತ್ತೆಗೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ನಾಪತ್ತೆಯ ಹಿಂದಿನ ನಿಖರ ಕಾರಣ ಏನು ಎಂಬುದು ತನಿಖೆಯಿಂದ ಹೊರಬರಬೇಕಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular