HomeKarnatakaBREAKING : ನಾಪತ್ತೆಯಾಗಿದ್ದ 'IAS' ಅಧಿಕಾರಿ ಜ್ಞಾನೇಂದ್ರ ಕುಮಾರ್ ಪ್ರತ್ಯಕ್ಷ; CID ವಿಚಾರಣೆಗೆ ಹಾಜರು

BREAKING : ನಾಪತ್ತೆಯಾಗಿದ್ದ ‘IAS’ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪ್ರತ್ಯಕ್ಷ; CID ವಿಚಾರಣೆಗೆ ಹಾಜರು

ಬೆಂಗಳೂರು: ಕೆಲ ದಿನಗಳಿಂದ ನಾಪತ್ತೆಯಾಗಿದ್ದಾರೆ ಎನ್ನಲಾಗಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಇದೀಗ ಪ್ರತ್ಯಕ್ಷರಾಗಿದ್ದು, ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಜ್ಞಾನೇಂದ್ರ ಕುಮಾರ್ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.

ಅಧಿಕಾರಿ ನಾಪತ್ತೆಯಾಗಿರುವ ಕುರಿತು ಹಲವು ಪ್ರಶ್ನೆಗಳು ಮೂಡಿದ್ದ ಹಿನ್ನೆಲೆಯಲ್ಲಿ, ಅವರ ಹಾಜರಾತಿ ಮಹತ್ವ ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಇತರೆ ವಿಚಾರಗಳ ಕುರಿತು ಸಿಐಡಿ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

ಜ್ಞಾನೇಂದ್ರ ಕುಮಾರ್ ಅವರಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವೆಲ್ಲ ಮಾಹಿತಿಯನ್ನು ಪಡೆಯಲಾಗಿದೆ ಎಂಬುದು ವಿಚಾರಣೆ ಪೂರ್ಣಗೊಂಡ ಬಳಿಕ ಸ್ಪಷ್ಟವಾಗುವ ನಿರೀಕ್ಷೆಯಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಧಿಕಾರಿ ಮನೆಯಲ್ಲಿ ಇಡಿ ಶೋಧ

ಕರ್ನಾಟಕ ಲೋಕಸೇವಾ ಆಯೋಗ (KPSC) ನೇಮಕಾತಿ ಅಕ್ರಮ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರ ಬೆಂಗಳೂರಿನ ನಿವಾಸದಲ್ಲಿ ಸುದೀರ್ಘ ಶೋಧ ನಡೆಸಿತ್ತು.

ಜಯಮಹಲ್ ರಸ್ತೆಯಲ್ಲಿರುವ ಜ್ಞಾನೇಂದ್ರ ಕುಮಾರ್ ಅವರ ನಿವಾಸದಲ್ಲಿ ಇ.ಡಿ. ಅಧಿಕಾರಿಗಳು ಸುಮಾರು 12 ಗಂಟೆಗಳ ಕಾಲ ಶೋಧ ಕಾರ್ಯಾಚರಣೆ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಇತರೆ ಮಹತ್ವದ ಮಾಹಿತಿಗಾಗಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಜ್ಞಾನೇಂದ್ರ ಕುಮಾರ್ ಅವರು ಈ ಹಿಂದೆ KPSCಯಲ್ಲಿ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದರು. ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆ ಸೇರಿದಂತೆ ಹಲವು ಪರೀಕ್ಷೆಗಳ ಜವಾಬ್ದಾರಿ ಅವರ ಮೇಲಿತ್ತು. KPSCಗೆ ಸಂಬಂಧಿಸಿದ ಅಕ್ರಮಗಳ ತನಿಖೆಯ ಭಾಗವಾಗಿ ಇ.ಡಿ. ಈಗಾಗಲೇ ಹಲವು ಸ್ಥಳಗಳಲ್ಲಿ ಶೋಧ ನಡೆಸಿದ್ದು, ಅದರ ಮುಂದುವರಿದ ಭಾಗವಾಗಿ ಜ್ಞಾನೇಂದ್ರ ಕುಮಾರ್ ಅವರ ನಿವಾಸದಲ್ಲೂ ಶೋಧ ನಡೆದಿತ್ತು.

ಇದರ ಬೆನ್ನಲ್ಲೇ ಜ್ಞಾನೇಂದ್ರ ಕುಮಾರ್ ಅವರು ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ರಾಜ್ಯ ಆಡಳಿತ ವಲಯದಲ್ಲಿ ಚರ್ಚೆಗೆ ಕಾರಣವಾಗಿತ್ತು. ಆದರೆ, ಅವರು ನಾಪತ್ತೆಯಾಗಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದರು. ತಮ್ಮ ತಂದೆಯ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ಉತ್ತರ ಪ್ರದೇಶಕ್ಕೆ ತೆರಳಿದ್ದಾರೆ ಎಂದು ಸಚಿವರು ಹೇಳಿದ್ದರು.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular