HomeKarnatakaಇಬ್ಬರು ಐಎಎಸ್, ಇಬ್ಬರು ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಇಬ್ಬರು ಐಎಎಸ್, ಇಬ್ಬರು ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಇಬ್ಬರು ಐಎಎಸ್ ಮತ್ತು ಇಬ್ಬರು ಕೆಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಬಿಬಿಎಂಪಿ(ಚುನಾವಣೆ) ವಿಶೇಷ ಆಯುಕ್ತರಾಗಿದ್ದ ಆರ್. ರಾಮಚಂದ್ರನ್ ಅವರನ್ನು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಅವರಿಂದ ತೆರವಾದ ಸ್ಥಾನಕ್ಕೆ ಡಾ.ಆರ್. ಸೆಲ್ವಮಣಿ ಅವರನ್ನು ವರ್ಗಾವಣೆ ಮಾಡಲಾಗಿದೆ.

ಇದರೊಂದಿಗೆ ಇಬ್ಬರು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಕುವೆಂಪು ವಿವಿ ಕುಲಸಚಿವರಾಗಿ ಹೆಚ್.ಪಿ. ವಿಜಯಕುಮಾರ್, ಮಂಗಳೂರು ವಿವಿ ಕುಲಸಚಿವರಾಗಿ ರಾಜು ಮೊಗವೀರ ಅವರನ್ನು ವರ್ಗಾವಣೆ ಮಾಡಲಾಗಿದೆ.

ಚುನಾವಣಾ ಆಯೋಗದ ನಿರ್ದೇಶನದಂತೆ ನಿನ್ನೆಯಷ್ಟೇ 42 ಕೆಎಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿದ್ದು, ಚುನಾವಣೆ ಪ್ರಕ್ರಿಯೆ ಮುಕ್ತಾಯವಾದ ನಂತರ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ಹುದ್ದೆಗಳಲ್ಲಿ ವರದಿ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular