ಬೆಂಗಳೂರು: ರಾಜ್ಯ ಸರ್ಕಾರ ಐವರು ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಬೆಂಗಳೂರು ಪ್ರಾದೇಶಿಕ ಆಯುಕ್ತರಾಗಿದ್ದ ಆಮ್ಲನ್ ಆದಿತ್ಯ ಬಿಸ್ವಾಸ್ ಅವರನ್ನು ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾಗಿದ್ದ ಆಮ್ಲನ್ ಆದಿತ್ಯ ಬಿಸ್ವಾಸ್ ಅವರನ್ನು ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದ್ದು, ಹುದ್ದೆಯ ನಿರೀಕ್ಷೆಯಲ್ಲಿದ್ದ ಕ್ಯಾಪ್ಟನ್ ಡಾ. ರಾಜೇಂದ್ರ ಕೆ. ಅವರಿಗೆ ಬೆಂಗಳೂರು ವಿಭಾಗದ ನೂತನ ಪ್ರಾದೇಶಿಕ ಆಯುಕ್ತರ ಹೊಣೆ ನೀಡಲಾಗಿದೆ.
ಪಂಕಜ್ ಕುಮಾರ್ ಪಾಂಡೆ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯ ಜೊತೆಗೆ ಇ-ಆಡಳಿತ ಇಲಾಖೆಯ ಹೆಚ್ಚುವರಿ ಜವಾಬ್ದಾರಿಯನ್ನು ಮುಂದುವರಿಸಲಾಗಿದೆ.
ಕಾರ್ಮಿಕ ಇಲಾಖೆ ಸರ್ಕಾರದ ಕಾರ್ಯದರ್ಶಿಯಾಗಿದ್ದ ಸಲ್ಮಾ ಕೆ. ಫಾಹೀಮ್ ಅವರನ್ನು ಸರ್ಕಾರದ ಕಾರ್ಯದರ್ಶಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ವಿಭಾಗಕ್ಕೆ ನೇಮಿಸಲಾಗಿದೆ.
ಹುದ್ದೆ ನಿರೀಕ್ಷೆಯಲ್ಲಿದ್ದ ಕ್ಯಾಪ್ಟನ್ ಡಾ. ರಾಜೇಂದ್ರ ಕೆ. ಅವರನ್ನು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಹುದ್ದೆಗೆ ನೇಮಿಸಲಾಗಿದೆ.
ಡಾ. ರಾಗಪ್ರಿಯಾ ಆರ್.ಆಯುಕ್ತರು, ಕಾರ್ಮಿಕ ಇಲಾಖೆ, ಬೆಂಗಳೂರು ವ್ಯವಸ್ಥಾಪಕ ನಿರ್ದೇಶಕರು (MD) ಇವರನ್ನು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ (KSSIDC) -ಕ್ಕೆ ವರ್ಗಾವಣೆ ಮಡಲಾಗಿದೆ.
5 ಹಿರಿಯ ಐಎಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಮತ್ತು ಹೆಚ್ಚುವರಿ ಹೊಣೆಗಾರಿಕೆ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಡಿಪಿಎಆರ್) ಸರ್ಕಾರದ ಅಧೀನ ಕಾರ್ಯದರ್ಶಿ ಟಿ. ಮಹಾಂತೇಶ್ ಈ ಕುರಿತು ಅಧಿಸೂಚನೆ ಹೊರಡಿಸಿದ್ದಾರೆ.

