HomeEntertainment'ಇಬ್ಬನಿ ತಬ್ಬಿದ ಇಳೆಯಲಿ' ಚಿತ್ರದ ಟ್ರೈಲರ್ ರಿಲೀಸ್

‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಟ್ರೈಲರ್ ರಿಲೀಸ್

ತನ್ನ ಹಾಡುಗಳಿಂದಲೇ ಎಲ್ಲರ ಗಮನ ಸೆಳೆದಿರುವ ರೋಮ್ಯಾಂಟಿಕ್ ಡ್ರಾಮ ಕಥಾದಾರಿತ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಟ್ರೈಲರನ್ನು ನಿನ್ನೆಯಷ್ಟೇ ಪರಂವಾ ಸ್ಟುಡಿಯೋಸ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟ್ರೈಲರ್ ಕೆಲವೇ ಕ್ಷಣಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ ಮೂಲಕ ನೋಡುಗರ ಗಮನ ಸೆಳೆದಿದೆ.

ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶಿಸಿರುವ ಈ ಚಿತ್ರದಲ್ಲಿ ವಿಹಾನ್ ಅಂಕಿತ ಅಮರ್ ಮತ್ತು ಮಯೂರಿ ನಟರಾಜ ಪ್ರಮುಖ ಪಾತ್ರದಲ್ಲಿದ್ದು, ಗಿರಿಜಾ ಶೆಟ್ಟರ್, ಸಲ್ಮಿನ್ ಶೆರಿಫ್, ಶಂಕರ್ ಮೂರ್ತಿ ಎಸ್.ಆರ್., ರಕ್ಷಿತ್ ಕೌಪ್, ದವನ ಧನರಾಜ್, ಆದಿತ್ಯ ಬಿ ಪೂಜಾರ್, ಅನಿರುದ್ಧ್ ಭಟ್, ದಾಮಿನಿ ಧನರಾಜ್ ಉಳಿದ ತಾರಂಗಣದಲ್ಲಿದ್ದಾರೆ. ಗಗನ್ ಬಡೇರಿಯಾ ಸಂಗೀತ ಸಂಯೋಜನೆ ನೀಡಿದ್ದು, ರಕ್ಷಿತ್ ಕೌಪ್ ಸಂಕಲನ, ಶ್ರೀವತ್ಸನ್ ಸೆಲ್ವರಾಜನ್ ಛಾಯಾಗ್ರಹಣ ಹಾಗೂ ದೀಕ್ಷಿತ್ ಕುಮಾರ್ ನೃತ್ಯ ನಿರ್ದೇಶನವಿದೆ.

For Latest News Updates, Join Our Whatsapp Community🚩
RELATED ARTICLES

Most Popular