ʻಶ್ರೀಲಂಕಾ ಕ್ರಿಕೆಟ್ ಮಂಡಳಿʼ ಮೇಲಿನ ನಿಷೇಧ ಹಿಂಪಡೆದ ʻಐಸಿಸಿʼ | Sri Lanka Cricket

ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಶ್ರೀಲಂಕಾ ಕ್ರಿಕೆಟ್ (ಎಸ್ಎಲ್ಸಿ) ಮೇಲಿನ ನಿಷೇಧವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂತೆಗೆದುಕೊಂಡಿದೆ.

ತಮ್ಮ ವ್ಯವಹಾರಗಳನ್ನು ಸ್ವಾಯತ್ತವಾಗಿ ನಿರ್ವಹಿಸಲು ವಿಫಲವಾದ ಕಾರಣ ಮತ್ತು ಅವರ ಆಡಳಿತದಲ್ಲಿ ಸರ್ಕಾರದ ಹಸ್ತಕ್ಷೇಪಕ್ಕಾಗಿ ಕಳೆದ ವರ್ಷದ ನವೆಂಬರ್‌ ನಲ್ಲಿ ಶ್ರೀಲಂಕಾ ಕ್ರಿಕೆಟ್‌ ತಂಡದ ಮೇಲೆ ಮೇಲೆ ವಿಧಿಸಲಾದ ನಿಷೇಧವನ್ನು ಐಸಿಸಿ ಹಿಂತೆಗೆದುಕೊಂಡಿದೆ.

ಐಸಿಸಿ ಕಳೆದ ಎರಡು ತಿಂಗಳುಗಳಿಂದ ಎಸ್ಎಲ್ಸಿಯ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ ಶ್ರೀಲಂಕಾದ ಕ್ರೀಡಾ ಸಚಿವ ಹರಿನ್ ಫರ್ನಾಂಡೊ ಅಮಾನತು ತೆರವುಗೊಳಿಸುವ ಬಗ್ಗೆ ಟ್ವೀಟ್ ಮಾಡಿದ್ದಾರೆ. ಶೀಘ್ರದಲ್ಲೇ ಅಧಿಕೃತ ಹೇಳಿಕೆ ಬರಲಿದೆ ಎಂದು ಅವರು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read