BIG NEWS: ಹದಿಹರೆಯದವರಲ್ಲಿ ಇತ್ತೀಚೆಗೆ ಹೆಚ್ಚಿರುವ ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ: ದೇಶದಲ್ಲಿ ಕಳೆದ ಒಂದು ವರ್ಷದಿಂದ ಹದಿಹರೆದ ಯುವಕರಲ್ಲಿ ಕಂಡುಬಂದಿರುವ ಹೃದಯಾಘಾತಕ್ಕೂ ಕೋವಿಡ್ ಲಸಿಕೆಗೂ ಸಂಬಂಧವಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹೇಳಿದ್ದಾರೆ.

ರಾಜ್ಯಸಭೆಗೆ ಈ ಬಗ್ಗೆ ಮಾಹಿತಿ ನೀಡಿರುವ ಅವರು, ಕೊರೋನಾ ಸಾಂಕ್ರಾಮಿಕ ರೋಗದ ನಂತರ 18ರಿಂದ 45 ವರ್ಷ ವಯೋಮಾನದ ಜನರಲ್ಲಿ ದಿಢೀರ್ ಕಂಡು ಬಂದಿದ್ದ ಹೃದಯಾಘಾತ ಕುರಿತು ಭಾರತೀಯ ವೈದ್ಯಕೀಯ ವಿಜ್ಞಾನ ಸಂಶೋಧನಾ ಮಂಡಳಿ ದೇಶದ 66 ಆಸ್ಪತ್ರೆಗಳಲ್ಲಿ ಅಧ್ಯಯನ ನಡೆಸಿದೆ. ಅಧ್ಯಯನದಲ್ಲಿ ಕೋವಿಡ್ ಲಸಿಕೆಯಿಂದ ಯಾವುದೇ ಹೃದಯಾಘಾತ ಸಂಭವಿಸಿಲ್ಲ. ಬದಲಾಗಿ ಹೃದಯಾಘಾತದ ಸಂಬಂಧಿಸಿದ ಸಾವುಗಳನ್ನು ಅದು ತಡೆದಿದೆ ಎಂದು ತಿಳಿಸಿದ್ದಾರೆ.

ಕೋವಿಡ್ ವ್ಯಾಕ್ಸಿನೇಷನ್ ಭಾರತದಲ್ಲಿ ಯುವ ವಯಸ್ಕರಲ್ಲಿ ಹಠಾತ್ ಸಾವಿನ ಅಪಾಯವನ್ನು ಹೆಚ್ಚಿಸುವುದಿಲ್ಲ, ಬದಲಿಗೆ ಕಡಿಮೆ ಮಾಡುತ್ತದೆ ಎಂದು ICMR ಅಧ್ಯಯನವು ನಿರ್ಣಾಯಕವಾಗಿ ದಾಖಲಿಸಿದೆ ಎಂದು ರಾಜ್ಯಸಭೆಗೆ ನಡ್ಡಾ ತಿಳಿಸಿದ್ದಾರೆ.

ಕೋವಿಡ್-19 ಹಿಂದಿನ ಆಸ್ಪತ್ರೆಗೆ ದಾಖಲು, ಹಠಾತ್ ಸಾವಿನ ಕುಟುಂಬದ ಇತಿಹಾಸ ಮತ್ತು ಕೆಲವು ಜೀವನಶೈಲಿ ನಡವಳಿಕೆಗಳು ವಿವರಿಸಲಾಗದ ಹಠಾತ್ ಸಾವಿನ ಸಾಧ್ಯತೆಯನ್ನು ಹೆಚ್ಚಿಸಿವೆ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read