HomeHealthGood News: ಕ್ಯಾನ್ಸರ್ ಗುಣಪಡಿಸಬಹುದು, ಮೊದಲು ಏನು ಮಾಡಬೇಕು?

Good News: ಕ್ಯಾನ್ಸರ್ ಗುಣಪಡಿಸಬಹುದು, ಮೊದಲು ಏನು ಮಾಡಬೇಕು?

“ಇತ್ತೀಚಿನ ದಿನಗಳಲ್ಲಿ ಜೀವನ ಶೈಲಿ ಮತ್ತು ಆಹಾರ ಪದ್ದತಿಯಿಂದ ಕ್ಯಾನ್ಸರ್ ಕಾಯಿಲೆ ಹೆಚ್ಚಾಗಿದ್ದು, ಇದನ್ನು ಗುಣಪಡಿಸುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ. ಕ್ಯಾನ್ಸರ್ ಕುರಿತು ಜನರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ” ಎಂದು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನಿರ್ದೇಶಕಿ, ಡೀನ್ ಡಾ.ಪೂರ್ಣಿಮಾ .ಆರ್.ಟಿ ಹೇಳಿದರು.

ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕರ್ನಾಟಕ ರಾಜ್ಯ ಶಾಖೆ ಬೆಂಗಳೂರು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉತ್ತರ ಕನ್ನಡ ಜಿಲ್ಲಾ ಶಾಖೆ, ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕ್ರಿಮ್ಸ್), ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯೋಜಿಸಿದ್ದ ಕ್ಯಾನ್ಸರ್ ಜಾಗೃತಿ ಹಾಗೂ ತಪಾಸಣಾ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.

“ಕ್ಯಾನ್ಸರ್ ಗುಣಲಕ್ಷಣಗಳಾದ ಗಂಟು, ನೋವು, ಗಾಯ, ಊತ, ಹುಣ್ಣು ಇರುವುದು ಕಂಡು ಬಂದಲ್ಲಿ ಕೂಡಲೇ ವೈದ್ಯರ ಬಳಿ ಸಮಾಲೋಚನೆ ಪಡೆದು ಆರಂಭದ ಹಂತದಲ್ಲೇ ಚಿಕಿತ್ಸೆ ಪಡೆದುಕೊಂಡರೆ ಕೆಲವು ಕ್ಯಾನ್ಸರ್‌ಗಳನ್ನು ಗುಣಪಡಿಸಬಹುದಾಗಿದೆ” ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ಈ ಕಾರ್ಯಗಾರದ ಸದುಪಯೋಗ ಪಡೆದುಕೊಂಡು ಕ್ಯಾನ್ಸರ್ ಕಾಯಿಲೆಯ ಗುಣಲಕ್ಷಣಗಳ ಕುರಿತು ಜನರಲ್ಲಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಜಾಗೃತಿ ಮೂಡಿಸಬೇಕು. ಇದರಿಂದ ತಮ್ಮ ಕುಟುಂಬ ಮತ್ತು ಸುತ್ತ ಮುತ್ತಲಿನ ಜನರು ಆರೋಗ್ಯಕರ ಜೀವನ ಸಾಗಿಸಲು ಸಾಧ್ಯ ಹಾಗೂ ಸಮಾಜದಲ್ಲಿನ ಕ್ಯಾನ್ಸರ್ ಸವಾಲನ್ನು ಸುಲಭವಾಗಿ ಎದುರಿಸಬಹುದು” ಎಂದು ಹೇಳಿದರು.

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೈದ್ಯಕೀಯ ಅಧೀಕ್ಷಕ ಡಾ.ನರೇಶ ಪಾವಸ್ಕರ್ ಮಾತನಾಡಿ, “ಧೂಮಪಾನ, ಮದ್ಯಪಾನದಂತಹ ಚಟುಚಟಿಕೆಗಳ ಪರಿಣಾಮಗಳಿಂದ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗಿ ಬರುವ ಸಾಧ್ಯತೆಯಿದೆ. ಇಂತಹ ವ್ಯಸನಗಳಿಂದ ದೂರ ಉಳಿಯಬೇಕು” ಎಂದು ತಿಳಿಸಿದರು.

“ಕ್ಯಾನ್ಸರ್ ಬಂದರೆ ಸಂಪೂರ್ಣವಾಗಿ ಗುಣಪಡಿಸುವುದು ಅಸಾಧ್ಯ. ಆದರೆ ದೇಹದಲ್ಲಿ ವೈರಾಣುಗಳು ಹರಡುವ ಆರಂಭದ ಹಂತದಲೇ ಚಿಕಿತ್ಸೆ ಪಡೆದುಕೊಳ್ಳುವುದರಿಂದ ಗುಣಮುಖರಾಗಬಹುದು” ಎಂದು ಹೇಳಿದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉತ್ತರ ಕನ್ನಡ ಜಿಲ್ಲಾ ಶಾಖೆಯ ಸಭಾಪತಿ ವಿ.ಎಮ್.ಹೆಗಡೆ ಮಾತನಾಡಿ, “ಜಿಲ್ಲೆಯಲ್ಲಿ ಕ್ಯಾನ್ಸರ್ ಪ್ರಕರಣ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದು ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮೂಲಕ ಜನರಲ್ಲಿ ಜಾಗೃತಿ ಮೂಡಿಸಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ತಾವುಗಳು ಮನೆ ಮನೆಗೆ ತೆರಳಿ ಜನರಲ್ಲಿ ಕ್ಯಾನ್ಸರ್ ಗುಣಲಕ್ಷಣಗಳ ಕುರಿತಂತೆ ಅರಿವು ಮೂಡಿಸಬೇಕು” ಎಂದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular