HomeLatest Newsಅನರ್ಹ ಪಡಿತರ ಚೀಟಿದಾರರ ಪತ್ತೆ ಹಚ್ಚಿ ಅರ್ಹರಿಗೆ ಹೊಸ ಬಿಪಿಎಲ್ ಕಾರ್ಡ್ ವಿತರಣೆ: ಸಚಿವ ಮುನಿಯಪ್ಪ

ಅನರ್ಹ ಪಡಿತರ ಚೀಟಿದಾರರ ಪತ್ತೆ ಹಚ್ಚಿ ಅರ್ಹರಿಗೆ ಹೊಸ ಬಿಪಿಎಲ್ ಕಾರ್ಡ್ ವಿತರಣೆ: ಸಚಿವ ಮುನಿಯಪ್ಪ

ದಾವಣಗೆರೆ: ಅನಧಿಕೃತ ಪಡಿತರ ಚೀಟಿದಾರರನ್ನು ಪತ್ತೆ ಹಚ್ಚಿ ಅರ್ಹರಿಗೆ ಹೊಸ ಪಡಿತರ ಚೀಟಿ ವಿತರಿಸಲು ಕ್ರಮ ಕೈಗೊಳ್ಳುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.

ದಾವಣಗೆರೆಯ ಪರಿವೀಕ್ಷಣಾ ಮಂದಿರದಲ್ಲಿ ಶನಿವಾರ ಜಿಲ್ಲಾಮಟ್ಟದ ಆಹಾರ ಇಲಾಖೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಅನರ್ಹರ ಪಡಿತರ ಕಾರ್ಡ್ ಗಳನ್ನು ಪತ್ತೆ ಮಾಡಿ ಅರ್ಹರಿಗೆ ಹೊಸ ಕಾರ್ಡ್ ಗಳನ್ನು ನೀಡಲಾಗುವುದು. ಕಾನೂನು ಮಾಪನಶಾಸ್ತ್ರ ಇಲಾಖೆಯ ಅಧಿಕಾರಿಗಳು ತೂಕ ಮತ್ತು ಅಳತೆಯ ಗುಣಮಟ್ಟ ಕಾಪಾಡುವಲ್ಲಿ ಗಮನಹರಿಸಬೇಕು. ಅಂಗಡಿಗಳಲ್ಲಿ ತೂಕದ ಯಂತ್ರಗಳನ್ನು ತಪಾಸಣೆ ಮಾಡಿ, ಸತ್ಯಾಪಣ ಮತ್ತು ಮುದ್ರೆ ಮಾಡಿ ಪ್ರಮಾಣ ಪತ್ರ ವಿತರಿಸಬೇಕು. ಪೆಟ್ರೋಲ್ ಬಂಕ್ಗಳಲ್ಲಿ ಸಾರ್ವಜನಿಕರಿಗೆ ಯಾವುದೇ ಮೋಸವಾಗದಂತೆ ನಿಗಾ ವಹಿಸಬೇಕು ಎಂದು ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular