ಹಾಸನ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲೆಯ ಐ.ಡಿ.ಎಫ್.ಸಿ ಫಸ್ಟ್ ಭಾರತ್ ಲಿಮಿಟೆಡ್ ಸಹಭಾಗಿತ್ವದಲ್ಲಿ ಈ ಖಾಸಗಿ ಬ್ಯಾಂಕ್ಗೆ ಜಿಲ್ಲೆಯ ಯುವಕ ಯುವತಿಯರಿಗೆ ಉದ್ಯೋಗ ನೀಡುವ ಸಂಬಂಧ ಸೆ.29 ರಂದು ಬೆಳಿಗ್ಗೆ 10.30 ರಿಂದ 12:30 ಗಂಟೆಗೆ ನೇರ ಸಂದರ್ಶನ ನಡೆಯಲಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಉದ್ಯೋಗಧಿಕಾರಿ ತಿಳಿಸಿದ್ದಾರೆ.
ಐ.ಟಿ.ಐ. ಪಿ.ಯು.ಸಿ, ಡಿಪ್ಲೋಮೊ ಮತ್ತು ಯಾವುದೇ ಪದವಿ ಪಾಸಾದ ಪುರುಷ/ಮಹಿಳಾ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ರೈಲ್ವೇ ಸ್ಟೇಷನ್ ಹತ್ತಿರ, ಸರ್ಕಾರಿ ಐ.ಟಿ.ಐ. ಕಾಲೇಜು ಆವರಣದಲ್ಲಿ ನಡೆಯಲ್ಲಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ :- 08172-296374, 9482120663 ರವರನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.
ಮೈಸೂರು ದಸರಾ ಪುಸ್ತಕ ಮೇಳ: ಹೊಸ ಪುಸ್ತಕಗಳ ಬಿಡುಗಡೆಗೆ ಲೇಖಕರು, ಪ್ರಕಾಶಕರಿಂದ ಅರ್ಜಿ ಆಹ್ವಾನ
ಬಳ್ಳಾರಿ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗುತ್ತಿರುವ ‘ದಸರಾ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ–2026’ರಲ್ಲಿ ಹೊಸ ಪುಸ್ತಕಗಳನ್ನು ಬಿಡುಗಡೆ ಮಾಡಲು ಆಸಕ್ತ ಲೇಖಕರು ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೈಸೂರು ನಗರದ ಹಳೆಯ ಜಿಲ್ಲಾಧಿಕಾರಿ ಕಚೇರಿ ಎದುರಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಅಕ್ಟೋಬರ್ 11 ರಿಂದ 20ರವರೆಗೆ ಪುಸ್ತಕ ಮೇಳ ನಡೆಯಲಿದೆ. ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿಚಾರ ಸಂಕಿರಣಗಳ ಜೊತೆಗೆ, 2026ರಲ್ಲಿ ಪ್ರಕಟವಾದ ನೂತನ ಕೃತಿಗಳನ್ನು ನಾಡಿನ ಖ್ಯಾತ ಸಾಹಿತಿಗಳ ಸಮ್ಮುಖದಲ್ಲಿ ಬಿಡುಗಡೆ ಮಾಡಲು ಕನ್ನಡ ಪುಸ್ತಕ ಪ್ರಾಧಿಕಾರ ನಿರ್ಧರಿಸಿದೆ.
ಅರ್ಜಿ ಸಲ್ಲಿಕೆ ಮತ್ತು ನಿಯಮಗಳು:
ಆಸಕ್ತರು ಪ್ರಾಧಿಕಾರದ ಅಧಿಕೃತ ವೆಬ್ಸೈಟ್ (https://kpp.karnataka.gov.in) ಮೂಲಕ ನಿಗದಿತ ಅರ್ಜಿ ನಮೂನೆಯನ್ನು ಉಚಿತವಾಗಿ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಯೊಂದಿಗೆ ಬಿಡುಗಡೆ ಮಾಡಲಿರುವ ಪುಸ್ತಕದ 3 ಪ್ರತಿಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 05, 2026 ಕೊನೆಯ ದಿನಾಂಕವಾಗಿದ್ದು, ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಪುಸ್ತಕಗಳು ಯಾವುದೇ ವಿವಾದಾತ್ಮಕ ಅಂಶಗಳನ್ನು ಹೊಂದಿರಬಾರದು. ಕಾನೂನು ತೊಡಕುಗಳು ಎದುರಾದಲ್ಲಿ ಲೇಖಕರು ಅಥವಾ ಪ್ರಕಾಶಕರೇ ನೇರ ಹೊಣೆಗಾರರಾಗಿರುತ್ತಾರೆ. ಪುಸ್ತಕಗಳ ಆಯ್ಕೆ ಮತ್ತು ತಿರಸ್ಕರಿಸುವ ಅಂತಿಮ ಹಕ್ಕು ಪ್ರಾಧಿಕಾರಕ್ಕಿರುತ್ತದೆ. ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಯಾವುದೇ ಪ್ರಯಾಣ ಭತ್ಯೆ ಅಥವಾ ಸಂಭಾವನೆ ಇರುವುದಿಲ್ಲ.
ಸ್ವೀಕೃತವಾಗುವ ಪುಸ್ತಕಗಳ ಸಂಖ್ಯೆಗೆ ಅನುಗುಣವಾಗಿ, ಮೇಳ ನಡೆಯುವ ಒಂಬತ್ತು ದಿನಗಳಲ್ಲಿ ಬಿಡುಗಡೆಯ ದಿನಾಂಕವನ್ನು ನಿಗದಿಪಡಿಸಿ ಸಂಬಂಧಪಟ್ಟವರಿಗೆ ಮುಂಚಿತವಾಗಿ ಮಾಹಿತಿ ನೀಡಲಾಗುವುದು.
ಹೆಚ್ಚಿನ ವಿವರಗಳಿಗಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರನ್ನು (ಮೊ: 9448056562) ಸಂಪರ್ಕಿಸಬಹುದು ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೀಕ್ಷಾಭೂಮಿ ಧರ್ಮಯಾತ್ರೆಗೆ ಶಿಕಾರಿಪುರ ತಾಲೂಕಿನ ಪರಿಶಿಷ್ಟ ಜಾತಿಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಶಿವಮೊಗ್ಗ : 2026-27ನೇ ಸಾಲಿನಲ್ಲಿ ಮಹಾರಾಷ್ಟ್ರ ರಾಜ್ಯದ ನಾಗಪುರದಲ್ಲಿರುವ ಪವಿತ್ರ ತಾಣ ‘ದೀಕ್ಷಾಭೂಮಿ’ಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿರುವ ಧರ್ಮಯಾತ್ರೆಗೆ ಶಿಕಾರಿಪುರ ತಾಲೂಕಿನ ಅರ್ಹ ಪರಿಶಿಷ್ಟ ಜಾತಿಯ ಯಾತ್ರಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿದಾರರು ಕಡ್ಡಾಯವಾಗಿ ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿದ್ದು, ಕನಿಷ್ಠ 18 ವರ್ಷ ಪೂರ್ಣಗೊಂಡಿರಬೇಕು (ಹಿರಿಯ ನಾಗರಿಕರಿಗೆ ಮೊದಲ ಆದ್ಯತೆ ಇರುತ್ತದೆ). ಈ ಹಿಂದೆ ಸರ್ಕಾರದ ಯಾವುದೇ ಇಲಾಖೆಯಿಂದ ನಾಗಪುರ ದೀಕ್ಷಾಭೂಮಿ ಪ್ರವಾಸ ಯೋಜನೆಯ ಸೌಲಭ್ಯ ಪಡೆದಿರಬಾರದು. ಹಾಗೆಯೇ ಯಾತ್ರೆಗೆ ಆಯ್ಕೆಯಾಗುವ ಅಭ್ಯರ್ಥಿಗಳು ದೈಹಿಕವಾಗಿ ಸದೃಢರಾಗಿರಬೇಕು ಮತ್ತು ವೈದ್ಯಕೀಯ ದೃಢೀಕರಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕಿರುತ್ತದೆ.
ಆಸಕ್ತರು ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ನಿವಾಸದ ದೃಢೀಕರಣಕ್ಕಾಗಿ ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ/ರೇಷನ್ ಕಾರ್ಡ್, ವಯಸ್ಸಿನ ದೃಢೀಕರಣ ಪತ್ರ ಹಾಗೂ ಜಾತಿ ಪ್ರಮಾಣ ಪತ್ರದೊಂದಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು.
ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್ಸೈಟ್ https://swd.karnataka.gov.in/ ಮೂಲಕ ಮಾತ್ರ ಸಲ್ಲಿಸಬೇಕಾಗಿದ್ದು, ಕಚೇರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸುವ ಭೌತಿಕ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ 19-09-2026 ಹಾಗೂ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 09-10-2026 ಆಗಿದೆ.
ಹೆಚ್ಚಿನ ವಿವರಗಳು ಮತ್ತು ಅರ್ಜಿ ಸಲ್ಲಿಕೆಗಾಗಿ ಇಲಾಖೆಯ ವೆಬ್ಸೈಟ್ಗೆ ಭೇಟಿ ನೀಡಬಹುದು ಅಥವಾ ಶಿಕಾರಿಪುರದ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ಸಹಾಯಕ ನಿರ್ದೇಶಕರು (ಗ್ರೇಡ್-1) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

