HomeLatest NewsBIG NEWS : ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದ್ದಾರೆ : ಕಾಂಗ್ರೆಸ್...

BIG NEWS : ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದ್ದಾರೆ : ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ಧಾಳಿ

ಬೆಂಗಳೂರು : ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದಂತೆ ಕಾಂಗ್ರೆಸ್ ಸರ್ಕಾರ ತಾನು ಮಾಡಿದ ತಪ್ಪಿಗೆ ಮೂವರು ಐಪಿಎಸ್ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿದೆ. ಸಿಎಂ ಸಿದ್ದರಾಮಯ್ಯ
ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ವಾಗ್ಧಾಳಿ ನಡೆಸಿದ್ದಾರೆ.

ಅವರು ಪ್ರಚಾರದ ತೆವಲಿಗೆ ಬಿದ್ದು RCB ವಿಜಯೋತ್ಸವ ಕಾರ್ಯಕ್ರಮವನ್ನು ವಿಧಾನಸೌಧದ ಮುಂಭಾಗ ಆಯೋಜನೆ ಮಾಡಿ 11 ಅಮಾಯಕ ಅಭಿಮಾನಿಗಳನ್ನು ಬಲಿ ಪಡೆದರು. ಕಾಲ್ತುಳಿತ ಪ್ರಕರಣಕ್ಕೆ ಪೊಲೀಸರೇ ಕಾರಣ ಎಂದು ರಾಜ್ಯ ಸರ್ಕಾರ, ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ನರಿ ಬುದ್ದಿ ತೋರಿಸಿದೆ. ಅಸಲಿಗೆ 11 ಜನರನ್ನು ಬಲಿ ಪಡೆದಿದ್ದು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರೇ ಹೊರತು ಪೊಲೀಸರಲ್ಲ ಎಂದು ಬಿಜೆಪಿ ವಾಗ್ಧಾಳಿ ನಡೆಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular