HomeKarnatakaಅಯೋಧ್ಯೆ ರಾಮಮಂದಿರದಲ್ಲಿ ಅಕ್ರಮ ನಡೆದಿದ್ದಲ್ಲಿ ಖಂಡಿತವಾಗಿಯೂ ಶಿಕ್ಷೆಯಾಗಬೇಕು: ಪೇಜಾವರ ಶ್ರೀ ಹೇಳಿಕೆ

ಅಯೋಧ್ಯೆ ರಾಮಮಂದಿರದಲ್ಲಿ ಅಕ್ರಮ ನಡೆದಿದ್ದಲ್ಲಿ ಖಂಡಿತವಾಗಿಯೂ ಶಿಕ್ಷೆಯಾಗಬೇಕು: ಪೇಜಾವರ ಶ್ರೀ ಹೇಳಿಕೆ

ಉಡುಪಿ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ನಡೆದಿರುವುದು ಹೌದಾದರೆ ಖಂಡಿತವಾಗಿಯೂ ಶಿಕ್ಷೆಯಾಗಬೇಕು ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಹೇಳಿದ್ದಾರೆ.

ಜುಲೈ 10 ರಂದು ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಸಭೆ ಇದೆ. ನಾನು ಭಾಗವಹಿಸುತ್ತೇನೆ. ಅಲ್ಲಿ ಎಲ್ಲಾ ವಿಚಾರ ತಿಳಿದುಕೊಂಡ ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದು ವಿಶ್ವಪ್ರಸನ್ನ ತೀರ್ಥ ಶ್ರೀಗಳು ಹೇಳಿದ್ದಾರೆ.

ದೇಣಿಗೆ ನೀಡುವವರು, ಪಡೆದವರು ಇಬ್ಬರಿಗೂ ಜವಾಬ್ದಾರಿ ಇದೆ. ದೇಣಿಗೆ ಪಡೆದು ರಶೀದಿ ಕೊಟ್ಟಿಲ್ಲವಾದರೆ ಅದು ದೊಡ್ಡ ತಪ್ಪು. ಆದರೆ ರಶೀದಿ ಕೊಟ್ಟಿಲ್ಲ ಎನ್ನುವ ಮಾತು ನಂಬಲು ಆಗುವುದಿಲ್ಲ. ಎಸ್ಐಟಿ ತನಿಖೆ ನಡೆಸುತ್ತಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ. ಅಕ್ರಮ ನಡೆದಿರುವುದು ಹೌದಾದರೆ ಖಂಡಿತವಾಗಿಯೂ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಮ ಜನ್ಮ ಭೂಮಿ ಕ್ಷೇತ್ರ ತೀರ್ಥಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ ನೀಡಿದ ಬಗ್ಗೆ ನನಗೆ ಮಾಹಿತಿ ಇಲ್ಲ. ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ ಬಗ್ಗೆ ವಾಟ್ಸಾಪ್ ಗ್ರೂಪ್ ನಲ್ಲಿ ಅವರು ಯಾವುದೇ ಸಂದೇಶ ಹಾಕಿಲ್ಲ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular