ಬಿಜೆಪಿಗೆ ಅಷ್ಟು ಪ್ರೀತಿ ಇದ್ರೆ ‘ಪ್ರಹ್ಲಾದ್ ಜೋಶಿ’ ಬದಲು ‘ಶ್ರೀಕಾಂತ್ ಪೂಜಾರಿ’ಗೆ ಟಿಕೆಟ್ ನೀಡಲಿ : ಕಾಂಗ್ರೆಸ್

ಬೆಂಗಳೂರು : ಬಿಜೆಪಿಗೆ ಅಷ್ಟು ಪ್ರೀತಿ ಇದ್ರೆ ಪ್ರಹ್ಲಾದ್ ಜೋಶಿ ಬದಲು ‘ಶ್ರೀಕಾಂತ್ ಪೂಜಾರಿ’ಗೆ ಟಿಕೆಟ್ ನೀಡಲಿ ಎಂದು ಕಾಂಗ್ರೆಸ್ ಟಾಂಗ್ ನೀಡಿದೆ.

ಈ ಬಗ್ಗೆ ಎಕ್ಸ್ ನಲ್ಲಿ ಟ್ವೀಟ್ ಮಾಡಿದ ಕಾಂಗ್ರೆಸ್ ಕಳ್ಳಭಟ್ಟಿ, ಮಟ್ಕಾ ದಂಧೆಕೋರ ಶ್ರೀಕಾಂತ್ ಪೂಜಾರಿ 16 ಪ್ರಕರಣದಲ್ಲಿ ಭಾಗಿಯಾಗುವ ಮೂಲಕ ಬಿಜೆಪಿ ಅಭ್ಯರ್ಥಿಯಾಗುವ ಮಾನದಂಡಗಳನ್ನು ಪೂರೈಸಿ ಅರ್ಹತೆ ಪಡೆದಿದ್ದಾನೆ!.

ಆತನ ಮೇಲೆ ಬಿಜೆಪಿಗೆ ಕಾಳಜಿ, ಪ್ರೀತಿ ಇದ್ದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರಕ್ಕೆ ಪ್ರಹ್ಲಾದ್ ಜೋಶಿ ಬದಲು ಶ್ರೀಕಾಂತ್ ಪೂಜಾರಿಗೆ ಟಿಕೆಟ್ ನೀಡಲಿ! ಹೊಸ ಪ್ರತಿಭೆಯನ್ನು ಪರಿಚಯಿಸಲಿ! ಕ್ರಿಮಿನಲ್ ಗಳಿಗೆ, ಕಳ್ಳರಿಗೆ, ಅತ್ಯಾಚಾರಿಗಳಿಗೆ, ರೌಡಿಗಳಿಗೆ ಬಿಜೆಪಿಯಲ್ಲಿ ಮನ್ನಣೆ ಎನ್ನುವುದು ಚಿತ್ತಾಪುರ ಕ್ಷೇತ್ರದಲ್ಲಿ ತೋರಿಸಿಕೊಟ್ಟಿದೆ. ಮೋದಿ ರೌಡಿ ಶೀಟರ್ಗೆ ಕೈ ಮುಗಿದು ನಿಲ್ಲುವ ಮೂಲಕ ಸಮಾಜಘಾತುಕ ಶಕ್ತಿಗಳೇ ಬಿಜೆಪಿಯ ಶಕ್ತಿ ಎಂಬುದು ನಿರೂಪಿತವಾಗಿದೆ ಎಂದು ಕಾಂಗ್ರೆಸ್ ಟಾಂಗ್ ನೀಡಿದೆ.

https://twitter.com/INCKarnataka/status/1742785876139422158

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read