ವಿಜಯಪುರ: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋತರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಥಾನ ಬದಲಾವಣೆಯಾಗಲಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಬಿಜೆಪಿ ಸೋತರೆ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕುವುದು ನಿಶ್ಚಿತ ಎಂದು ಹೇಳಿದ್ದಾರೆ.
ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯಲು ಬಿಜೆಪಿ ಉಚ್ಚಾಟಿತ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಗೆ ಇದು ಸುವರ್ಣಾವಕಾಶವಾಗಿದ್ದು, ಬಳಸಿಕೊಳ್ಳಬೇಕು. ಯತ್ನಾಳ್ ಬಿಜೆಪಿ ಪರ ಪ್ರಚಾರ ಮಾಡಿ ಬಿಜೆಪಿ ಗೆದ್ದರೆ ಅದರ ಕೀರ್ತಿ ವಿಜಯೇಂದ್ರ ಅವರಿಗೆ ಸಲ್ಲುತ್ತದೆ. ಯತ್ನಾಳ್ ಗೆ ಸ್ವಾಭಿಮಾನ, ಮಾನ ಮರ್ಯಾದೆ ಇದ್ದರೆ ಬಿಜೆಪಿ ಪರ ಪ್ರಚಾರಕ್ಕೆ ಹೋಗಬಾರದು ಎಂದು ಎಂ.ಬಿ. ಪಾಟೀಲ್ ಹೇಳಿದ್ದಾರೆ.

