HomeKarnatakaBIG NEWS : ಸಿ.ಟಿ.ರವಿ ಕೀಳುಭಾಷೆ ಬಳಸಿದ್ದು ಸುಳ್ಳಾದರೆ, ಅವರು ಅರೆಸ್ಟ್ ಆಗಿದ್ದು ಯಾಕೆ..? :...

BIG NEWS : ಸಿ.ಟಿ.ರವಿ ಕೀಳುಭಾಷೆ ಬಳಸಿದ್ದು ಸುಳ್ಳಾದರೆ, ಅವರು ಅರೆಸ್ಟ್ ಆಗಿದ್ದು ಯಾಕೆ..? : CM ಸಿದ್ದರಾಮಯ್ಯ ಪ್ರಶ್ನೆ

ಮಂಡ್ಯ : ಸಿಟಿ.ರವಿಯವರು ಕೀಳುಭಾಷೆ ಬಳಸಿದ್ದು ಸುಳ್ಳಾದರೆ ಅವರ ಬಂಧನವೇಕಾಯಿತು? ಸಾಮಾನ್ಯವಾಗಿ ಇಂತಹ ಆರೋಪಗಳ ಬಗ್ಗೆ ಹೆಣ್ಣುಮಕ್ಕಳು ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಸಿ.ಟಿ. ರವಿಯವರು ಅವಾಚ್ಯ ಪದ ಏಕೆ ಬಳಸಿದರೆಂದು ನನಗೆ ತಿಳಿದಿಲ್ಲ. ಆದರೆ ಇದೊಂದು ಗಂಭೀರ ಸ್ವರೂಪದ ಅಪರಾಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸಿ.ಟಿ ರವಿ ಬಂಧನ ವಿರೋಧಿಸಿ ಬಿಜೆಪಿ ಪಕ್ಷ ಪ್ರತಿಭಟನೆ ಮಾಡುವ ಮೂಲಕ ಹೆಣ್ಣುಮಕ್ಕಳಿಗೆ ಅವಹೇಳನಕಾರಿಯಾಗಿ ಮಾತನಾಡುವುದನ್ನು ಬೆಂಬಲಿಸುತ್ತಿದ್ದಾರೆ. ಸಿ.ಟಿ.ರವಿಯವರು ಕೀಳುಭಾಷೆ ಬಳಸಿದ್ದು ಸುಳ್ಳಾದರೆ ಅವರ ಬಂಧನವೇಕಾಯಿತು? ಸಾಮಾನ್ಯವಾಗಿ ಇಂತಹ ಆರೋಪಗಳ ಬಗ್ಗೆ ಹೆಣ್ಣುಮಕ್ಕಳು ಸುಳ್ಳು ದೂರು ಕೊಡಲು ಸಾಧ್ಯವಿಲ್ಲ.

ಸಿ.ಟಿ. ರವಿಯವರು ಅವಾಚ್ಯ ಪದ ಏಕೆ ಬಳಸಿದರೆಂದು ನನಗೆ ತಿಳಿದಿಲ್ಲ. ಆದರೆ ಇದೊಂದು ಗಂಭೀರ ಸ್ವರೂಪದ ಅಪರಾಧ. ಸಿ.ಟಿ.ರವಿಯವರು ತಾವು ‘ಪ್ರಸ್ಟ್ರೇಷನ್’ ಪದ ಬಳಸಿರುವುದಾಗಿ ತಿಳಿಸಿದ್ದಾರೆ. ಆದರೆ ಅವಾಚ್ಯ ಪದ ಬಳಸಿರುವುದು ನಿಜವೆಂದು ಸಚಿವರು ಹೇಳಿದ್ದಾರೆ. ಕೀಳು ಪದಬಳಕೆಯನ್ನು ಕೇಳಿರುವುದಾಗಿ ಅಲ್ಲಿಯೇ ಇದ್ದ ಇತರ ಸದಸ್ಯರೂ ಹೇಳಿದ್ದಾರೆ. ಸಭಾಪತಿಯವರು ಪೀಠದಿಂದ ಹೊರನಡೆದ ನಂತರ ನಡೆದಿರುವ ಘಟನೆ ಬಗ್ಗೆ ಆಡಿಯೋ ಮತ್ತು ವಿಡಿಯೋ ಇದೆ ಎಂದೂ ಹಲವರು ಹೇಳುತ್ತಿದ್ದು, ಪದಬಳಕೆಯಾಗಿರುವುದು ಸತ್ಯ. ಸಿ.ಟಿ ರವಿಯವರು ಎಸಗಿರುವ ಅಪರಾಧ ಕೃತ್ಯಕ್ಕೆ ಅನುಗುಣವಾಗಿ ಕಾನೂನಿನ ಕ್ರಮ ಜರುಗಿಸಬೇಕಾಗುತ್ತದೆ. ಬೆಳಗಾವಿಯಲ್ಲಿ ಜನರ ಆಕ್ರೋಶದಿಂದ ಸಿ.ಟಿ.ರವಿಯವರನ್ನು ರಕ್ಷಿಸಲು ಖಾನಾಪುರಕ್ಕೆ ಅವರನ್ನು ಕರೆತರಲಾಗಿತ್ತು ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular