HomeKarnatakaಬೇಡಿಕೆ ಈಡೇರದಿದ್ದರೆ ಎಲ್ಲಾ ಕೆಲಸ ಸ್ಥಗಿತಗೊಳಿಸಿ ಮುಷ್ಕರ: ಮಹಾನಗರ ಪಾಲಿಕೆ ನೌಕರರ ಎಚ್ಚರಿಕೆ

ಬೇಡಿಕೆ ಈಡೇರದಿದ್ದರೆ ಎಲ್ಲಾ ಕೆಲಸ ಸ್ಥಗಿತಗೊಳಿಸಿ ಮುಷ್ಕರ: ಮಹಾನಗರ ಪಾಲಿಕೆ ನೌಕರರ ಎಚ್ಚರಿಕೆ

ಬೆಂಗಳೂರು: ಮಹಾನಗರ ಪಾಲಿಕೆಗಳ ನೌಕರರ ವಿವಿಧ ಬೇಡಿಕೆಗಳನ್ನು ಮೇ 24 ರೊಳಗೆ ಈಡೇರಿಸದಿದ್ದರೆ ಎಲ್ಲಾ ಕೆಲಸ ಕಾರ್ಯಗಳ ಸ್ಥಗಿತಗೊಳಿಸಿ ಮುಷ್ಕರ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಸ್ಪಂದನೆ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯದ 10 ಮಹಾನಗರ ಪಾಲಿಕೆಗಳಲ್ಲಿ ಕೆಲಸ ಕಾರ್ಯ ಸ್ಥಗಿತಗೊಳಿಸಿ ಜೂನ್ ನಲ್ಲಿ ಮುಷ್ಕರ ಕೈಗೊಳ್ಳುವುದಾಗಿ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದಿಂದ ನಗರ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ 2025ರ ಜೂಲೈನಲ್ಲಿ ಸಂಘದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನಗರಾಭಿವೃದ್ಧಿ ಸಚಿವರು, ಕಾರ್ಯದರ್ಶಿಗಳು ಸಭೆ ನಡೆಸಿದ್ದರು. ಈ ವೇಳೆ ಪಾಲಿಕೆ ನೌಕರರ ಎಲ್ಲಾ ಬೇಡಿಕೆಗಳನ್ನು ಆರು ತಿಂಗಳೊಳಗೆ ಈಡೇರಿಸುವುದಾಗಿ ಭರವಸೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಅಂದು ಕೈಗೊಂಡಿದ್ದ ಮುಷ್ಕರ ಕೈ ಬಿಡಲಾಗಿತ್ತು. ಒಂದು ವರ್ಷ ಕಳೆದರೂ ಬೇಡಿಕೆ ಈಡೇರಿಸಿಲ್ಲ. ಹೀಗಾಗಿ ನ್ಯಾಯಯುತ ಬೇಡಿಕೆಗಳ ಈಡೇರಿಕೆ ಸಂಬಂಧ ಸಂಘದ ಪದಾಧಿಕಾರಿಗಳೊಂದಿಗೆ ಮೇ 24ರಂದು ಸಭೆ ನಡೆಸಿ ಮುಷ್ಕರದ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ಸಂಘದ ಅಧ್ಯಕ್ಷ ಎ. ಅಮೃತರಾಜ್ ಪತ್ರ ಬರೆದು ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular