HomeKarnatakaBREAKING : ಸ್ವಇಚ್ಛೆಯಿಂದ ರೈತರು ಜಮೀನು ನೀಡಿದರೆ ಮಾತ್ರ ಭೂಸ್ವಾಧೀನ, ಯಾವುದೇ ಒತ್ತಾಯ ಇಲ್ಲ: CM...

BREAKING : ಸ್ವಇಚ್ಛೆಯಿಂದ ರೈತರು ಜಮೀನು ನೀಡಿದರೆ ಮಾತ್ರ ಭೂಸ್ವಾಧೀನ, ಯಾವುದೇ ಒತ್ತಾಯ ಇಲ್ಲ: CM ಡಿ.ಕೆ. ಶಿವಕುಮಾರ್

ಬೆಂಗಳೂರು: ಬಿಡದಿ ಸಮಗ್ರ ಟೌನ್ಶಿಪ್ (Greater Bengaluru Integrated Township – GBIT) ಯೋಜನೆ ಕುರಿತು ನಡೆಯುತ್ತಿರುವ ರಾಜಕೀಯ ವಿವಾದದ ನಡುವೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. “ಬಿಡದಿ ಟೌನ್ಶಿಪ್ ನನ್ನ ಯೋಜನೆಯಲ್ಲ. ನಾನು ಈ ಯೋಜನೆಗೆ ಶಂಕುಸ್ಥಾಪನೆ ಮಾಡಿಲ್ಲ. ಹಿಂದಿನ ಸರ್ಕಾರಗಳ ಅವಧಿಯಲ್ಲೇ ಯೋಜನೆ ಆರಂಭವಾಗಿತ್ತು. ನಮ್ಮ ಸರ್ಕಾರ ಅದನ್ನು ಕಾನೂನುಬದ್ಧವಾಗಿ ಮುಂದುವರಿಸುತ್ತಿದೆ” ಎಂದು ಹೇಳಿದ್ದಾರೆ.

ಬಿಡದಿ ಟೌನ್ ಶಿಪ್ ಯೋಜನೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಹಾಗೂ ರೈತ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಈ ಯೋಜನೆಯನ್ನು ರಾಜಕೀಯವಾಗಿ ಬಣ್ಣಿಸಲಾಗುತ್ತಿದೆ ಎಂದು ಆರೋಪಿಸಿದರು. ಯೋಜನೆಯ ಮೂಲ ಅಧಿಸೂಚನೆ ಹಿಂದಿನ ಸರ್ಕಾರಗಳ ಕಾಲದಲ್ಲೇ ಹೊರಡಿಸಲಾಗಿದ್ದು, ಈಗಿನ ಸರ್ಕಾರ ಹೊಸದಾಗಿ ಯೋಜನೆ ಆರಂಭಿಸಿಲ್ಲ ಎಂದು ಅವರು ತಿಳಿಸಿದರು.

ಸ್ವಇಚ್ಚೆಯಿಂದ ರೈತರು ಜಮೀನು ಕೊಟ್ರೆ ಭೂ ಸ್ವಾಧೀನ ; ಸಿಎಂ ಡಿಕೆ ಶಿವಕುಮಾರ್

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಡದಿ ಸಮಗ್ರ ಟೌನ್ ಶಿಪ್ (GBIT) ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ರೈತರು ಸ್ವಇಚ್ಛೆಯಿಂದ ಜಮೀನು ನೀಡಿದರೆ ಮಾತ್ರ ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಯಲಿದೆ. ಯಾವುದೇ ರೈತನ ಮೇಲೆ ಬಲವಂತ ಅಥವಾ ಒತ್ತಡ ಹೇರುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದ್ದಾರೆ.
ಯೋಜನೆ ಕುರಿತು ಅನಗತ್ಯ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದ ಸಿಎಂ, ಸರ್ಕಾರ ರೈತರ ಹಿತಾಸಕ್ತಿಗೆ ಧಕ್ಕೆಯಾಗದಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು. ಈಗಾಗಲೇ ಸಾಕಷ್ಟು ರೈತರು ಸ್ವಯಂಪ್ರೇರಿತವಾಗಿ ಯೋಜನೆಗೆ ಬೆಂಬಲ ವ್ಯಕ್ತಪಡಿಸಿದ್ದು, ಸರ್ಕಾರ ಕಾನೂನುಬದ್ಧವಾಗಿ ಹಾಗೂ ಪಾರದರ್ಶಕವಾಗಿ ಭೂಸ್ವಾಧೀನ ಪ್ರಕ್ರಿಯೆ ನಡೆಸಲಿದೆ ಎಂದು ತಿಳಿಸಿದರು

ನಾನು ರೈತನ ಮಗ. ಟೌನ್ ಶಿಪ್ ಪಿತಾಮಹ ಆಗಲು ಬಯಸುವುದಿಲ್ಲ. ರೈತರ ಹಿತಾಸಕ್ತಿಗೆ ಧಕ್ಕೆ ತರುವ ಯಾವುದೇ ನಿರ್ಧಾರವನ್ನು ಸರ್ಕಾರ ಕೈಗೊಳ್ಳುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್ ಶಿಪ್ ಯೋಜನೆಯನ್ನು ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿವೆ ಎಂದು ಆರೋಪಿಸಿದ ಸಿಎಂ, ಈ ಯೋಜನೆ ತಮ್ಮ ಸರ್ಕಾರ ಆರಂಭಿಸಿದ್ದಲ್ಲ ಎಂದು ಹೇಳಿದರು. ಹಿಂದಿನ ಸರ್ಕಾರಗಳ ಅವಧಿಯಲ್ಲೇ ಯೋಜನೆ ಆರಂಭವಾಗಿದ್ದು, ಕಾನೂನು ಪ್ರಕ್ರಿಯೆಯ ಪ್ರಕಾರ ಸರ್ಕಾರ ನಡೆದುಕೊಳ್ಳುತ್ತಿದೆ ಎಂದು ತಿಳಿಸಿದರು.

ಸರ್ಕಾರ ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಪರಿಹಾರ ಮತ್ತು ಅಭಿವೃದ್ಧಿ ಹೊಂದಿದ ಭೂಮಿಯ ಹಂಚಿಕೆ ಸೇರಿದಂತೆ ಕಾನೂನುಬದ್ಧ ಕ್ರಮಗಳನ್ನು ಕೈಗೊಂಡಿದೆ ಎಂದು ಸಿಎಂ ಹೇಳಿದರು. ಯೋಜನೆಯ ಬಗ್ಗೆ ತಪ್ಪು ಮಾಹಿತಿ ಹರಡಲಾಗುತ್ತಿದ್ದು, ರೈತರನ್ನು ದಿಕ್ಕು ತಪ್ಪಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಆರೋಪಿಸಿದರು.

ಇದಕ್ಕೂ ಮುನ್ನ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬಿಡದಿ ಟೌನ್ಶಿಪ್ ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿದ್ದು, ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ದೇವೇಗೌಡ ಅವರು ಸರ್ಕಾರ ಯೋಜನೆಯನ್ನು ಹಿಂಪಡೆಯದಿದ್ದರೆ ಸತ್ಯಾಗ್ರಹ ನಡೆಸುವ ಎಚ್ಚರಿಕೆಯನ್ನೂ ನೀಡಿದ್ದಾರೆ.
ಬಿಡದಿ ಟೌನ್ಶಿಪ್ ಯೋಜನೆ ಇದೀಗ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪಗಳು ಮುಂದುವರಿದಿವೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular