‘ಜನಾರ್ಧನ ರೆಡ್ಡಿ’ ಪಟಾಲಂ ಬಳ್ಳಾರಿಯಲ್ಲಿ ಬೆಳೆದರೆ ಇಡೀ ಜಿಲ್ಲೆ ಆತಂಕದಲ್ಲಿ ನರಳಬೇಕಾಗುತ್ತದೆ : ಸಿಎಂ ಸಿದ್ದರಾಮಯ್ಯ

ಬಳ್ಳಾರಿ :  ಜನಾರ್ಧನ ರೆಡ್ಡಿ ಪಟಾಲಂ ಬಳ್ಳಾರಿಯಲ್ಲಿ ಬೆಳೆದರೆ ಇಡೀ ಜಿಲ್ಲೆ ಆತಂಕದಲ್ಲಿ ನರಳಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ‘ಜನಾರ್ಧನ ರೆಡ್ಡಿಯವರ ಪಟಾಲಂ ಬಳ್ಳಾರಿಯಲ್ಲಿ ಬೆಳೆದರೆ ಇಡೀ ಜಿಲ್ಲೆ ಭಯ, ಆತಂಕದಲ್ಲಿ ನರಳಬೇಕಾಗು’ತ್ತದೆ. ಮತ್ತೆ ಬಳ್ಳಾರಿ “ರಿಪಬ್ಲಿಕ್ ಆಫ್ ಬಳ್ಳಾರಿ” ಆಗಲು ಬಿಡಬೇಡಿ. ಬಿಜೆಪಿಯನ್ನು ಸೋಲಿಸಿ, ಬಳ್ಳಾರಿ ಉಳಿಸಿ ಎಂದಿದ್ದಾರೆ.

‘ಹತ್ತು ಹಲವು ಭಾಗ್ಯಗಳನ್ನು ಕೊಟ್ಟಿದ್ದು, ಐದಕ್ಕೆ ಐದೂ ಗ್ಯಾರಂಟಿಗಳನ್ನೂ ಜಾರಿ ಮಾಡಿ ವರ್ಷಕ್ಕೆ ₹56 ಸಾವಿರ ಕೋಟಿ ಹಣವನ್ನು ನಿಮ್ಮ ಖಾತೆಗೆ ನೇರವಾಗಿ ಹಾಕ್ತಾ ಇರುವುದು ನಮ್ಮ ಸರ್ಕಾರ. ಆದ್ದರಿಂದ ನಿಮ್ಮ ಬದುಕಿಗೆ ಪ್ರತೀ ತಿಂಗಳು ಬೆಳಕು ನೀಡುವ ನಮಗೆ ಬೆಂಬಲಿಸಬೇಕೋ, ಚುನಾವಣೆ ಬಂದಾಗ ಕೊಡುವ ಅಕ್ರಮ ಗಣಿಗಾರಿಕೆಯ ಹಣಕ್ಕೆ ಓಟು ಹಾಕಬೇಕೋ? ನೀವೇ ತೀರ್ಮಾನಿಸಿ. ನಾವಿನ್ನೂ ಮೂರೂವರೆ ವರ್ಷ ಅಧಿಕಾರದಲ್ಲಿ ಇರ್ತೀವಿ. ಅಲ್ಲಿಯವರೆಗೂ ನಾವು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಮುಂದುವರೆಸ್ತೀವಿ.

 

‘ಬಿಜೆಪಿಅಪಪ್ರಚಾರವನ್ನು ನಂಬಬೇಡಿ‌. ಸುಳ್ಳುಗಳಿಗೆ ಮೋಸ ಹೋಗಬೇಡಿ. ಹೃದಯದ ಮಾತು ಕೇಳಿ ಅಭಿವೃದ್ಧಿಗೆ ನಿಮ್ಮ ಮತ ನೀಡಿ. ಅನ್ನಪೂರ್ಣಮ್ಮ ಗೆದ್ದರೆ ನಾನೇ ಗೆದ್ದ ಹಾಗೆ‌. ಅನ್ನಪೂರ್ಣಮ್ಮ ಅವರಿಗೆ ಬೀಳುವ ಪ್ರತೀ ಓಟು ನನಗೆ ಹಾಕಿದಂತೆ, ಸಂತೋಷ್ ಲಾಡ್ ಅವರಿಗೆ ಹಾಕಿದಂತೆ. ಎಂದು ಸಿಎಂ ಸಿದ್ದರಾಮಯ್ಯ ಪ್ರಚಾರ ಮಾಡಿದ್ದಾರೆ’.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read