ಬೆಂಗಳೂರು: ರಾಜ್ಯ ಸರ್ಕಾರದ ಇತರೆ ಇಲಾಖೆಗಳು ಒಪ್ಪಿಗೆ ನೀಡಿದಲ್ಲಿ ಮೊದಲಿನಂತೆ ಎಲ್ಲಾ ಕಟ್ಟಡಗಳಿಗೂ ಒಸಿ, ಸಿಸಿ ಇಲ್ಲದೆ ವಿದ್ಯುತ್ ಸಂಪರ್ಕ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ಕಲಾಭದಲ್ಲಿ ಬಿಜೆಪಿ ಸದಸ್ಯ ಡಾ.ಎಂ.ಜಿ. ಮುಳೆ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಈ ಮೊದಲು ಒಸಿ, ಸಿಸಿ ಇಲ್ಲದೇ ಎಲ್ಲರಿಗೂ ವಿದ್ಯುತ್ ಸಂಪರ್ಕ ನೀಡಲಾಗುತ್ತಿತ್ತು. ಆದರೆ ಸುಪ್ರೀಂ ಕೋರ್ಟ್ ಆದೇಶ ಬಂದ ಮೇಲೆ ಕೆ.ಇ.ಆರ್.ಸಿ. ಒಸಿ, ಸಿಸಿ ಇಲ್ಲದ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡದಂತೆ ತಿಳಿಸಿದೆ. ಹೀಗಾಗಿ ಆದೇಶ ಪಾಲನೆ ಮಾಡಬೇಕಿದೆ ಎಂದು ಹೇಳಿದ್ದಾರೆ.
ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ಇಲಾಖೆ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರ 40*60 ಅಳತೆಯಲ್ಲಿ ಎರಡು ಮಹಡಿಯ ಕಟ್ಟಡಗಳಿಗೆ ಒಸಿ, ಸಿಸಿ ವಿನಾಯಿತಿ ನೀಡಿ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಅದೇ ರೀತಿ ಎಲ್ಲಾ ಕಟ್ಟಡಗಳಿಗೂ ವಿನಾಯಿತಿ ನೀಡಿದರೆ ಈ ಮೊದಲಿನಂತೆ ಎಲ್ಲಾ ಕಟ್ಟಡಗಳಿಗೂ ವಿದ್ಯುತ್ ಸಂಪರ್ಕ ನೀಡಲಾಗುವುದು ಎಂದು ಸಚಿವರು ಹೇಳಿದ್ದಾರೆ.

