 ಬೆಂಗಳೂರು : ಜನ ಸಂಕಷ್ಟದಲ್ಲಿದ್ದರೆ ಕರ್ನಾಟಕದ ‘ನೀರೋ’ ಕ್ರಿಕೆಟ್ ಮ್ಯಾಚ್ ನೋಡ್ತಿದ್ದ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಬೆಂಗಳೂರು : ಜನ ಸಂಕಷ್ಟದಲ್ಲಿದ್ದರೆ ಕರ್ನಾಟಕದ ‘ನೀರೋ’ ಕ್ರಿಕೆಟ್ ಮ್ಯಾಚ್ ನೋಡ್ತಿದ್ದ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ಹೆಚ್ಡಿಕೆ ವಿದ್ಯುತ್ ಕ್ಷಾಮ ಮತ್ತು ಬರದಲ್ಲಿ ಜನರು ಬೆಯುತ್ತಿದ್ದರೆ ದಿನಪೂರ್ತಿ ಕೂತು ಕ್ರಿಕೆಟ್ ನೋಡುವಷ್ಟು ಶೋಕಿದಾರ! ರೋಮ್ ನಗರ ಹೊತ್ತಿ ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ!! ಜನ ಸಂಕಷ್ಟದಲ್ಲಿದ್ದರೆ ಕರ್ನಾಟಕದ ನೀರೋ ಕ್ರಿಕೆಟ್ ಮ್ಯಾಚ್ ನೋಡುತ್ತಿದ್ದ ಎಂದು ಹೇಳುವ ಮೂಲಕ ಟಾಂಗ್ ನೀಡಿದ್ದಾರೆ.
ಜಲ ವಿದ್ಯುತ್ ಹೊರತುಪಡಿಸಿ ಇತರೆ ಮೂಲಗಳ ವಿದ್ಯುತ್ ಉತ್ಪಾದನೆಗೂ ಖೋತಾ ಬೀಳಲಿಕ್ಕೆ ಪ್ರಕೃತಿ ಕಾರಣವೋ? ಅಥವಾ ನಿಮ್ಮ ʼಕೈ ಚಳಕʼವೇ ಕಾರಣವೋ? ಸತ್ಯ ಹೇಳಿದರೆ ನನ್ನ ಕಡೆಗೇ ಬೊಟ್ಟು ಮಾಡುತ್ತೀರಿ, ನಿಮ್ಮ ಸಚಿವರನ್ನು ….. ….. ಗಳಂತೆ ನನ್ನ ಮೇಲೆ ಛೂ ಬಿಡುತ್ತೀರಿ. ಎಷ್ಟು ದಿನ ನೆಪಗಳ ನಾಜೂಕತನ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
https://twitter.com/hd_kumaraswamy/status/1715936686147023003

 
		 
		 
		 
		 Loading ...
 Loading ... 
		 
		 
		