ಬೆಂಗಳೂರು: ರಾಜ್ಯದಲ್ಲಿ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರಗಳನ್ನು ಕಡ್ಡಾಯಗೊಳಿಸುವ ಉದ್ದೇಶದಿಂದ ಕಾನೂನು ತಿದ್ದುಪಡಿ ಮಾಡಿ ನಿಯಮಗಳನ್ನು ರಚಿಸಲು ನಿರ್ಧರಿಸಲಾಗಿದೆ. ಸಚಿವ ಸಂಪುಟ ಒಪ್ಪಿದಲ್ಲಿ ಸುಗ್ರೀವಾಜ್ಞೆ ಹೊರಡಿಸಲಾಗುವುದು ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಪತ್ರ ಕಡ್ಡಾಯಗೊಳಿಸುವ ಕಾಯ್ದೆ ತಿದ್ದುಪಡಿಗೆ ಕರಡು ಈಗಾಗಲೇ ಸಿದ್ಧವಾಗಿದೆ. ಸೆಪ್ಟೆಂಬರ್ 11ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕರಡು ಮಸೂದೆಯನ್ನು ಮಂಡಿಸಿ ಚರ್ಚೆ ನಡೆಸಲಾಗುವುದು. ಸುಗ್ರೀವಾಜ್ಞೆಗೆ ರಾಜ್ಯಪಾಲರು ಅನುಮೋದನೆ ನೀಡುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
ಮತಪತ್ರ ಕಡ್ಡಾಯ ಮಾಡುವುದರಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬವಾಗುವುದಿಲ್ಲ. ಅಂತಹ ಉದ್ದೇಶವೂ ಸರ್ಕಾರಕ್ಕೆ ಇಲ್ಲ. ಸ್ಥಳೀಯ ಸಂಸ್ಥೆಗಳಲ್ಲಿ ಚುನಾವಣೆಯಲ್ಲಿ ಮತಪತ್ರ ಕಡ್ಡಾಯಗಳ ಮಾಡುವ ಉದ್ದೇಶದಿಂದ ಕಾನೂನು ತಿದ್ದುಪಡಿ ಮಾಡಿ ನಿಯಮ ರಚಿಸಲು ತೀರ್ಮಾನಿಸಲಾಗಿದೆ. ಸಂಪುಟ ಸಭೆ ಒಪ್ಪಿದಲ್ಲಿ ಸುಗ್ರಿವಾಜ್ಞೆ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.