ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿದ್ರೆ ಮುಂದಾಗುವ ಅನಾಹುತಗಳಿಗೆ ಸರ್ಕಾರವೇ ನೇರ ಹೊಣೆ ; ಬಿಜೆಪಿ

ಬೆಂಗಳೂರು : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿದ್ರೆ ಮುಂದಾಗುವ ಅನಾಹುತಗಳಿಗೆ ಸರ್ಕಾರವೇ ನೇರ ಹೊಣೆ ಎಂದು ಬಿಜೆಪಿ ಟ್ವೀಟ್ ಮೂಲಕ ಕುಟುಕಿದೆ.

ಬಣ್ಣ ಬದಲಿಸುವಲ್ಲಿ ಕಾಂಗ್ರೆಸ್ ಸರ್ಕಾರದವರು ಊಸರವಳ್ಳಿಯನ್ನು ಸಹ ಮೀರಿಸುತ್ತಾರೆ. ಗ್ಯಾರಂಟಿಗಳೇ ನಮ್ಮ ಸರ್ಕಾರಕ್ಕೆ ಶ್ರೀರಕ್ಷೆ ಎಂದು ಬಡಾಯಿ ಕೊಚ್ಚಿಕೊಂಡಿದ್ದ ಶಾಸಕರೆಲ್ಲರೂ ಈಗ ಗ್ಯಾರಂಟಿಯಿಂದಲೇ ನಮ್ಮ ಸರ್ಕಾರಕ್ಕೆ ಹಿನ್ನಡೆ ಎನ್ನುತ್ತಿರುವುದು ಹತಾಶೆಯ ಪರಮಾವಧಿ. ಲೋಕಸಭಾ ಚುನಾವಣೆಯಲ್ಲಿ ಸೋತ ಕಾರಣಕ್ಕೆ ಗ್ಯಾರಂಟಿಗಳನ್ನು ನಿಲ್ಲಿಸಿದರೆ, ಕರ್ನಾಟಕದಲ್ಲಿ ಮುಂದಾಗುವ ಅನಾಹುತಗಳಿಗೆ ಕಾಂಗ್ರೆಸ್ ಸರ್ಕಾರವೇ ನೇರ ಕಾರಣವಾಗುತ್ತದೆ ಎಂದು ಎಂದು ಬಿಜೆಪಿ ಟ್ವೀಟ್ ಮೂಲಕ ಕುಟುಕಿದೆ.

ಕಾಲ್ನಡಿಗೆ ಜಾಥಾ

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪಡಿಸಿಕೊಂಡು ನಾಡಿನ ವಾಲ್ಮೀಕಿ ಸಮುದಾಯಕ್ಕೆ ದ್ರೋಹ ಎಸಗಿರುವ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಇಂದು ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರ ನೇತೃತ್ವದ ನಿಯೋಗವು ವಿಧಾನಸೌಧದಿಂದ ರಾಜಭವನದವರೆಗೆ ಕಾಲ್ನಡಿಗೆ ಜಾಥಾ ನಡೆಸಿ ರಾಜ್ಯಪಾಲರಾದ ಶ್ರೀ ಥಾವರ್ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಪ್ರತಿಪಕ್ಷ ನಾಯಕರಾದ ಅಶೋಕ್ , ಶಾಸಕರು, ಪರಿಷತ್ ಸದಸ್ಯರು, ರಾಜ್ಯ ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

https://twitter.com/BJP4Karnataka/status/1798649787342094361

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read