BIG NEWS : ‘ಹೈಕಮಾಂಡ್’ ತೀರ್ಮಾನಿಸಿದರೆ 5 ವರ್ಷವೂ ನಾನೇ ಸಿಎಂ : ಸಂಚಲನ ಮೂಡಿಸಿದ ಸಿದ್ದರಾಮಯ್ಯ ಹೇಳಿಕೆ.!

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿವಿಧ ಸಚಿವರು ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಪ್ರಜಾಪ್ರಭುತ್ವದಲ್ಲಿ ಮುಖ್ಯಮಂತ್ರಿಗಳ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್ ಗೆ ಸೇರಿದ್ದಾಗಿದೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿಯೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ.

ಈ ಮೂಲಕ ಹೈಕಮಾಂಡ್ ಒಪ್ಪಿದರೆ ನಾನೇ ಐದು ವರ್ಷ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.ಈ ಬೆಳವಣಿಗೆ ನಡುವೆಯೇ ದೆಹಲಿಗೆ ತೆರಳಿ ವಾಪಸ್ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಸಿಎಂ ಅವರು ಹೇಳಿದ ಮೇಲೆ ಮುಗಿಯಿತು. ಅವರು ಹೇಳಿದ ಮೇಲೆ ಇನ್ನೇನಿದೆ? ಅವರು ಹೇಗೆ ಹೇಳುತ್ತಾರೋ ಹಾಗೆ ನಾವು ಕೇಳುತ್ತೇವೆ ಎಂದು ತಿಳಿಸಿದ್ದಾರೆ.

ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿರುವ ನಡುವೆಯೇ ಮಂಗಳೂರಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಾವುದೇ ಟಾರ್ಗೆಟ್ ಇಟ್ಟುಕೊಂಡು ಮಂಗಳೂರಿಗೆ ಭೇಟಿ ನೀಡುತ್ತಿಲ್ಲ ಎಂದು ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲವೂ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು ಎಂದು ಹೇಳಿದ್ದಾರೆ.
ಡಿ.ಕೆ.ಶಿವಕುಮಾರ್, ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ ಸಿಎಂ ಸ್ಥಾನದ ರೇಸ್ ನಲ್ಲಿರುವ ವಿಚಾರವಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ಪರ್ಧೆ ತಪ್ಪಿಸಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವದಲ್ಲಿ ಮುಖ್ಯಮಂತ್ರಿಗಳ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್ ಗೆ ಸೇರಿದ್ದಾಗಿದೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿಯೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದರು.

ಬೆಂಗಳೂರಿನ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಹೈಕಮಾಂಡ್ ಒಪ್ಪಿದರೇ ನಾನೇ ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತೇನೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಸಿಎಂ ಅವರು ಹೇಳಿದ ಮೇಲೆ ಆಯಿತು. ಇನ್ನೇನಿದೆ? ಎಂದರು.

ದೆಹಲಿ ಭೇಟಿ ವಿಚಾರವಾಗಿ, ನಮ್ಮ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯೆಯಾದ ಅಂಬಿಕಾ ಸೋನಿಯವರ ಮನೆಗೆ ಭೇಟಿ ನೀಡಿದ್ದೆ. ಅವರ ಪತಿ ತೀರಿಕೊಂಡಿದ್ದರು. ಹೀಗಾಗಿ ಸಂತಾಪ ಸೂಚಿಸಲು ಅವರ ಮನೆಗೆ ಭೇಟಿ ನೀಡಿದ್ದೆ. ನಾನು ತಿಹಾರ್ ಜೈಲಿನಲ್ಲಿದ್ದಾಗ ಅವರು ಸೋನಿಯಾ ಗಾಂಧಿ ಅವರ ಜೊತೆ ಬಂದು ನನ್ನನ್ನು ಭೇಟಿ ಮಾಡಿದ್ದರು. ನನಗೂ ಅವರಿಗೂ ಬಹಳ ಆತ್ಮೀಯತೆ. ನಮ್ಮ ಪಕ್ಷದ ನಾಯಕರು ಅವರು. ಎಸ್.ಎಂ.ಕೃಷ್ಣ ಅವರು ಅಧಿಕಾರದಲ್ಲಿದ್ದಾಗ ನಮಗೆ ಪ್ರಧಾನ ಕಾರ್ಯದರ್ಶಿಯಾಗಿದ್ದರು. ನನ್ನನ್ನು ತಮ್ಮನಂತೆ ಕಂಡಿದ್ದರು, ನನ್ನ ಕೆಲಸಗಳಿಗೆ ಪ್ರೋತ್ಸಾಹ ನೀಡುತ್ತಿದ್ದರು. ಹಾಗಾಗಿ ನಾನು ಅವರ ಮನೆಗೆ ಭೇಟಿ ನೀಡಿದ್ದೆ ಎಂದು ತಿಳಿಸಿದರು.
ನಾನು ದೆಹಲಿಗೆ ಹೋಗಿದ್ದ ವಿಷಯ, ಕೆಲಸದ ಬಗ್ಗೆ ಮಾತ್ರ ಹೇಳಬಲ್ಲೆ. ಹೈಕಮಾಂಡ್ ಭೇಟಿ ಬಗ್ಗೆ ಮಾಧ್ಯಮದವರು, ಸಾರ್ವಜನಿಕರು, ಇನ್ನೂ ಬೇರೆಯವರು ಏನು ಬೇಕಾದರೂ ಚರ್ಚೆ ಮಾಡಿಕೊಳ್ಳಲಿ. ಯಾರು ಬೇಕಾದರೂ ಮಾತಾಡಿಕೊಳ್ಳಲಿ. ನನಗದು ಸಂಬಂಧ ಪಡದ ವಿಷಯ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read