HomeLatest Newsಸಿಎಂ, ಡಿಸಿಎಂ ನಡುವೆ ಒಪ್ಪಂದ ಆಗಿದ್ರೆ ಅಧಿಕಾರ ಹಂಚಿಕೆಯಾಗಲಿ: ಕಾಂಗ್ರೆಸ್ ಶಾಸಕ ದೇವೇಂದ್ರಪ್ಪ ಹೊಸ ಬಾಂಬ್

ಸಿಎಂ, ಡಿಸಿಎಂ ನಡುವೆ ಒಪ್ಪಂದ ಆಗಿದ್ರೆ ಅಧಿಕಾರ ಹಂಚಿಕೆಯಾಗಲಿ: ಕಾಂಗ್ರೆಸ್ ಶಾಸಕ ದೇವೇಂದ್ರಪ್ಪ ಹೊಸ ಬಾಂಬ್

ದಾವಣಗೆರೆ: ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ನಡುವೆ ಅಧಿಕಾರ ಹಂಚಿಕೆ ಒಪ್ಪಂದ ಆಗಿದ್ದರೆ ಅಧಿಕಾರ ಹಂಚಿಕೆಯಾಗಲಿ ಎಂದು ಕಾಂಗ್ರೆಸ್ ಶಾಸಕ ಬಿ. ದೇವೇಂದ್ರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.

ಅಧಿಕಾರ ಹಂಚಿಕೆಯಾಗಲಿ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ಆದರೆ, ಸದ್ಯಕ್ಕೆ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಸಿಎಂ ಸ್ಥಾನ ಖಾಲಿ ಇಲ್ಲವೆಂದ ಮೇಲೆ ಅದರ ಬಗ್ಗೆ ಚರ್ಚೆ ಅನಗತ್ಯವಾಗಿದೆ ಎಂದು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ನನ್ನನ್ನು ಕರೆದು ಮಾತನಾಡಿಸಿದರು. ದಾವಣಗೆರೆ ಜಿಲ್ಲಾ ಉಸ್ತುವಾರಿ ಎಸ್.ಎಸ್. ಮಲ್ಲಿಕಾರ್ಜುನ್ ಕೂಡ ನನ್ನನ್ನು ಕರೆದು ಮಾತನಾಡಿದ್ದಾರೆ. ಆದರೆ ನಾನು ಯಾರ ವಿರುದ್ಧವೂ ಆರೋಪ ಮಾಡುವುದಿಲ್ಲ. ನನ್ನ ಜಗಳೂರು ವಿಧಾನಸಭಾ ಕ್ಷೇತ್ರ ಅಭಿವೃದ್ಧಿ ಆಗಬೇಕು ಅಷ್ಟೇ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಪ್ರಾದೇಶಿಕ, ಜಾತಿವಾರು ಲೆಕ್ಕಾಚಾರ ನಡೆದಲ್ಲಿ ನಾನು ಕೂಡ ಪ್ರಯತ್ನ ಮಾಡುತ್ತೇನೆ. ನಾನೇನು ಸನ್ಯಾಸಿಯಲ್ಲ, ಸಚಿವ ಸ್ಥಾನಕ್ಕಾಗಿ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular