‘ತಾಕತ್ ಇದ್ದರೆ HDK ಪೆನ್ ಡ್ರೈವ್ ಬಿಡುಗಡೆ ಮಾಡಲಿ’ : ಸಚಿವ ಶರಣಪ್ರಕಾಶ್ ಪಾಟೀಲ್ ಸವಾಲ್

ಬೆಂಗಳೂರು : ತಾಕತ್ ಇದ್ದರೆ ಹೆಚ್. ಡಿ ಕುಮಾರಸ್ವಾಮಿ ಪೆನ್ ಡ್ರೈವ್ ಬಿಡುಗಡೆ ಮಾಡಲಿ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ಸವಾಲ್ ಹಾಕಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವರ್ಗಾವಣೆ ದಂಧೆ ಆರೋಪ ಮಾಡಿದ್ದು, ನಾಳೆಯೇ ವರ್ಗಾವಣೆ ದಂಧೆಗೆ ಸಂಬಂಧಿಸಿದ ದಾಖಲೆ ಇದೆ ಎನ್ನಲಾಗಿರುವ ಪೆನ್ ಡ್ರೈವ್ ಬಿಡುಗಡೆ ಮಾಡಲು ಕುಮಾರಸ್ವಾಮಿ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಶರಣಪ್ರಕಾಶ್ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.. ಹೆಚ್ಡಿಕೆ ಸುಮ್ಮನೆ ಪೆನ್ ಡ್ರೈವ್ ಪ್ರದರ್ಶನ ಮಾಡುತ್ತೇನೆ ಎಂದು ಹೇಳುವುದು ಸರಿಯಲ್ಲ. ತಾಕತ್ ಇದ್ದರೆ ಕುಮಾರಸ್ವಾಮಿ ಪೆನ್ ಡ್ರೈವ್ ನಲ್ಲಿ ಏನಿದೆ ಎಂಬುದನ್ನು ತೋರಿಸಲಿ ಎಂದು ಸವಾಲ್ ಹಾಕಿದ್ದಾರೆ.

ಪೆನ್ ಡ್ರೈವ್ ಬಿಡುಗಡೆಯಾದ್ರೆ ಪ್ರಭಾವಿ ಸಚಿವರೊಬ್ಬರು ರಾಜೀನಾಮ ನೀಡಲಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಸದ್ಯ ರಾಜ್ಯ ರಾಜಕಾರಣದಲ್ಲಿ ಪೆನ್ ಡ್ರೈವ್ ಬಾಂಬ್ ಬಗ್ಗೆ ತೀವ್ರ ಚರ್ಚೆ ನಡೆದಿದ್ದು, ಸೋಮವಾರ ಪೆನ್ ಡ್ರೈವ್ ಬಿಡುಗಡೆ ಮಾಡಿ ರಾಜ್ಯ ಸರ್ಕಾರಕ್ಕೆ ಶಾಕ್ ನೀಡಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read