ಬೆಂಗಳೂರು : ರಾಜ್ಯದ 252 ಗ್ರಾಮ ಪಂಚಾಯಿತಿಗಳಲ್ಲಿ ಇಂದು ʼನೀರಿದ್ದರೆ ನಾಳೆʼ ಯೋಜನೆ ಜಾರಿಯಾಗಲಿದೆ.
ರಾಜ್ಯದ 15 ಜಿಲ್ಲೆಗಳ, 27 ತಾಲೂಕುಗಳಲ್ಲಿನ ಅಂತರ್ಜಲ ಅತಿಬಳಕೆಯ ಪಟ್ಟಿಯಲ್ಲಿರುವ 252 ಗ್ರಾಮ ಪಂಚಾಯಿತಿಗಳಲ್ಲಿ ʼನೀರಿದ್ದರೆ ನಾಳೆʼ ಯೋಜನೆಯನ್ನು ಮೊದಲ ಹಂತದಲ್ಲಿ ಅನುಷ್ಠಾನಗೊಳಿಸಲಾಗುವುದು. ಈ ಮಹತ್ವಾಕಾಂಕ್ಷಿ ಯೋಜನೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಚಾಲನೆ ನೀಡಲಿದ್ದಾರೆ ಎಂದು ಸಣ್ಣ ನೀರಾವರಿ ಸಚಿವರಾದ ಕೆ.ಎನ್ ಬೋಸರಾಜು ಅವರು ತಿಳಿಸಿದ್ದಾರೆ.

