BIG NEWS : ಸಂವಿಧಾನ ಇಲ್ಲದೇ ಹೋಗಿದ್ರೆ ಈಶ್ವರಪ್ಪ, ಸಿ.ಟಿ.ರವಿ ಕೂಲಿ ಕೆಲಸ ಮಾಡಬೇಕಿತ್ತು : ಸಿಎಂ ಸಿದ್ದರಾಮಯ್ಯ ವಾಗ್ಧಾಳಿ

ಚಿತ್ರದುರ್ಗ : ಬಾಬಾ ಸಾಹೇಬ್ ಅವರ ಸಂವಿಧಾನ ಇಲ್ಲದೇ ಹೋಗಿದ್ದರೆ ಕೆ.ಎಸ್.ಈಶ್ವರಪ್ಪ ಸಿ.ಟಿ.ರವಿ ಮತ್ತು ಆರ್.ಅಶೋಕ್ ಶಾಸಕರಾಗಿ ವಿಧಾನಸಭೆ ಪ್ರವೇಶಿಸಲು ಸಾಧ್ಯವೇ ಇರಲಿಲ್ಲ. ಯಾರದ್ದೋ ಹೊಲ ಗದ್ದೆಗಳಲ್ಲಿ ಕೂಲಿ ಮಾಡುತ್ತಾ ಕೂರಬೇಕಾಗಿತ್ತು ಎಂದು ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.

ಇಂದು ಕರ್ನಾಟಕ ಶೋಷಿತ ಜಾತಿ-ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಚಿತ್ರದುರ್ಗದಲ್ಲಿ ಆಯೋಜಿಸಿದ್ದ “ಶೋಷಿತರ ಜಾಗೃತಿ ಸಮಾವೇಶವನ್ನು” ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಬಾಬಾ ಸಾಹೇಬ್ ಅವರ ಸಂವಿಧಾನ ಇಲ್ಲದೇ ಹೋಗಿದ್ದರೆ ಕೆ.ಎಸ್.ಈಶ್ವರಪ್ಪ ಸಿ.ಟಿ.ರವಿ ಮತ್ತು ಆರ್.ಅಶೋಕ್ ಶಾಸಕರಾಗಿ ವಿಧಾನಸಭೆ ಪ್ರವೇಶಿಸಲು ಸಾಧ್ಯವೇ ಇರಲಿಲ್ಲ. ಯಾರದ್ದೋ ಹೊಲ ಗದ್ದೆಗಳಲ್ಲಿ ಕೂಲಿ ಮಾಡುತ್ತಾ ಕೂರಬೇಕಾಗಿತ್ತು. ಕುರಿ ಕಾಯುವವನ ಮಗ ಮುಖ್ಯಮಂತ್ರಿ ಆಗಿಬಿಟ್ಟೆ ಎನ್ನುವ ಕಾರಣಕ್ಕೆ ಪಟ್ಟ ಭದ್ರರು ನನ್ನನ್ನು ವಿರೋಧಿಸುತ್ತಾರೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಮಧ್ಯಮ ವರ್ಗ ಮತ್ತು ಬಡವರಿಗೆ ಅನುಕೂಲ ಆಗುವ ಯೋಜನೆಗಳನ್ನು ಜಾರಿಗೆ ತಂದಿದ್ದಕ್ಕೆ ನನ್ನನ್ನು ವಿರೋಧಿಸುತ್ತಿದ್ದಾರೆ.

ಅನ್ನಭಾಗ್ಯ, ಶೂ ಭಾಗ್ಯ, ಸಮವಸ್ತ್ರ ಭಾಗ್ಯ ಸೇರಿ ಸಾಲು ಸಾಲು ಅನುಕೂಲಗಳನ್ನು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ ಕಲ್ಪಿಸಿದೆ. ಇದಕ್ಕೇ ನನ್ನನ್ನು ವಿರೋಧಿಸುತ್ತಾರೆ. ಆದರೆ ನಾನು ಎದೆ ಗುಂದದೆ ನಿಮ್ಮ ಪರವಾಗಿ ಇರುತ್ತೇನೆ. ಜಾತಿ ತಾರತಮ್ಯ, ಜಾತಿ ಶೋಷಣೆ, ಜಾತಿ ಆಧಾರಿತ ಅಸಮಾನತೆ ಇರುವವರೆಗೆ ಇಂಥಾ ಸಮಾವೇಶಗಳು ಅಗತ್ಯ ಮತ್ತು ಅನಿವಾರ್ಯ. ಸಂಘಟನೆಗಳ ಮೂಲಕ ಜಗೃತಿ ಪಡೆದುಕೊಂಡರೆ ಮಾತ್ರ ಜಾತಿ ವ್ಯವಸ್ಥೆ ನಾಶವಾಗುತ್ತದೆ ಎನ್ನುವ ಎಚ್ಚರಿಕೆಯನ್ನು ಅಂಬೇಡ್ಕರ್ ಮುಂತಾದ ಮಹನೀಯರು ನೀಡಿದ್ದಾರೆ. ಕುಲ ಕುಲ ಎಂದು ಬಡಿದಾಡದಿರಿ ಎಂದು ಕರೆ ನೀಡಿದ ಕನಕದಾಸರನ್ನು ಒಂದು ಜಾತಿಗೆ ಸೀಮಿತಗೊಳಿಸಿ ಅವಮಾನಿಸಬೇಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read