HomeHealthಪದೇ ಪದೇ ಮೂತ್ರ ವಿಸರ್ಜನೆ ಸಮಸ್ಯೆ ಕಾಡುತ್ತಿದ್ದರೆ ಹೀಗೆ ನಿವಾರಿಸಿಕೊಳ್ಳಿ

ಪದೇ ಪದೇ ಮೂತ್ರ ವಿಸರ್ಜನೆ ಸಮಸ್ಯೆ ಕಾಡುತ್ತಿದ್ದರೆ ಹೀಗೆ ನಿವಾರಿಸಿಕೊಳ್ಳಿ

ಆಗಾಗ ಮೂತ್ರ ವಿಸರ್ಜನೆ ಮಾಡುವುದು ನಿಮ್ಮ ದೇಹದಲ್ಲಿ ಆರೋಗ್ಯ ಸಮಸ್ಯೆಯ ಸಂಕೇತವಾಗಿದೆ. ಮೂತ್ರಪಿಂಡದಲ್ಲಿ ಸೋಂಕು, ಮಧುಮೇಹ ಮುಂತಾದ ಸಮಸ್ಯೆ ಇದ್ದಾಗ ಈ ರೀತಿ ಪದೇ ಪದೇ ಮೂತ್ರ ವಿಸರ್ಜನೆ ಸಮಸ್ಯೆ ಕಾಡುತ್ತದೆ. ಮನೆಮದ್ದನ್ನು ಬಳಸಿ ಈ ಸಮಸ್ಯೆಯನ್ನು ನಿವಾರಿಸಬಹುದು. ಆದರೆ ಸಮಸ್ಯೆ ಮತ್ತಷ್ಟು ಹೆಚ್ಚಾದರೆ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.

ಮೂತ್ರಪಿಂಡದಲ್ಲಿ ಯಾವುದೇ ಸಮಸ್ಯೆಯಾದರೂ ಕೂಡ ಮೆಂತ್ಯ ಬೀಜಗಳು ಅದನ್ನು ನಿವಾರಿಸುತ್ತವೆ. ಇದು ದೇಹದಲ್ಲಿರುವ ಹಾನಿಕಾರಕ ಏಜೆಂಟ್ ಗಳನ್ನು ಹೊರಗೆ ಹಾಕುತ್ತದೆ. 3 ಚಮಚ ಮೆಂತ್ಯೆ ಬೀಜಗಳನ್ನು ಪುಡಿ ಮಾಡಿ ಅದಕ್ಕೆ 1 ಇಂಚು ತುರಿದ ಶುಂಠಿ, 1 ಚಮಚ ಜೇನುತುಪ್ಪ ಸೇರಿಸಿ ಮಿಕ್ಸ್ ಮಾಡಿ ಒಂದು ಲೋಟ ನೀರಿನಲ್ಲಿ ಸೇರಿಸಿ ಮಿಶ್ರಣ ಮಾಡಿ ದಿನಕ್ಕೆ 2 ಬಾರಿ ಸೇವಿಸಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಡುಗೆ ಸೋಡಾ ಮೂತ್ರಪಿಂಡದಲ್ಲಿರುವ ಬ್ಯಾಕ್ಟೀರಿಯಾವನ್ನು ನಾಶಮಾಡಲು ಸಹಕಾರಿಯಾಗಿದೆ. ಇದು ಸೋಂಕು ಹರಡುವುದನ್ನು ತಡೆಯುತ್ತದೆ. ಹಾಗಾಗಿ 1 ಗ್ಲಾಸ್ ಬೆಚ್ಚಗಿರುವ ನೀರಿಗೆ ½ ಚಮಚ ಅಡುಗೆ ಸೋಡಾ ಸೇರಿಸಿ ಪ್ರತಿದಿನ ಬೆಳಿಗ್ಗೆ ಸೇವಿಸಿ. ಇದನ್ನು ಕನಿಷ್ಠ ಒಂದು ವಾರ ಮಾಡಿ.

For Latest News Updates, Join Our Whatsapp Community🚩
RELATED ARTICLES

Most Popular