ಊಟವಾದ ತಕ್ಷಣ ಈ ಕೆಲಸಗಳನ್ನು ಮಾಡಿದರೆ ಅನಾರೋಗ್ಯ ಸಮಸ್ಯೆ ಕಾಡುವುದು ಖಂಡಿತ….!

ಉತ್ತಮ ಆರೋಗ್ಯ ಪಡೆಯಲು ನಾವು ಸೇವಿಸುವ ಆಹಾರ ಮತ್ತು ಪಾನೀಯಗಳ ಬಗ್ಗೆ ಗಮನ ಕೊಡಬೇಕು.

ಕೆಲವೊಮ್ಮೆ ಇವು ನಮ್ಮ ದೇಹದ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಹಾಗೇ ನಾವು ಮಾಡುವ ಕೆಲವೊಂದು ಕೆಲಸಗಳು ಕೂಡ ನಮ್ಮ ಆರೋಗ್ಯವನ್ನು ಹಾಳು ಮಾಡುತ್ತವೆ. ಹಾಗಾಗಿ ಊಟವಾದ ತಕ್ಷಣ ಈ ಕೆಲಸಗಳನ್ನು ಮಾಡಬೇಡಿ.

-ಊಟವಾದ ತಕ್ಷಣ ಬೇರೆ ಯಾವ ಕೆಲಸಗಳಲ್ಲಿ ತೊಡಗಬೇಡಿ. ಊಟದ ಬಳಿಕ ಸ್ವಲ್ಪ ಸಮಯ ವಿಶ್ರಾಂತಿ ಪಡೆಯಿರಿ.

-ಊಟವಾದ ತಕ್ಷಣ ಮಲಗಬೇಡಿ. ಇದು ನಿಮ್ಮ ಜೀರ್ಣಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ.

-ಊಟವಾದ ತಕ್ಷಣ ನೀರನ್ನು ಕುಡಿಯಬೇಡಿ. ಇದರಿಂದ ತಿಂದ ಆಹಾರ ಸರಿಯಾಗಿ ಜೀರ್ಣವಾಗದೆ ಅಜೀರ್ಣ ಸಮಸ್ಯೆ ಕಾಡುತ್ತದೆ.

-ಊಟವಾದ ತಕ್ಷಣ ಟೀ, ಕಾಫಿ ಕುಡಿಯಬೇಡಿ. ಇದರಿಂದ ಆಹಾರದಲ್ಲಿರುವ ಕಬ್ಬಿಣಾಂಶವನ್ನು ದೇಹವು ಹೀರಿಕೊಳ್ಳಲು ಸಾಧ್ಯವಾಗುವುದಿಲ್ಲ. ಹಾಗೇ ಪ್ರೋಟೀನ್ ನ್ನು ಜೀರ್ಣಿಸಿಕೊಳ್ಳಲು ಕಷ್ಟವಾಗುತ್ತದೆ.

-ಹಣ್ಣುಗಳು ಆರೋಗ್ಯಕ್ಕೆ ಉತ್ತಮ. ಆದರೆ ಊಟವಾದ ತಕ್ಷಣ ಹಣ್ಣುಗಳನ್ನು ಸೇವಿಸಿದರೆ ಇದು ಜೀರ್ಣಕ್ರಿಯೆ ಪ್ರಕ್ರಿಯೆಗೆ ಅಡ್ಡಿಪಡಿಸುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read