HomeKarnatakaನಿಮ್ ಏರಿಯಾದಲ್ಲಿ ಚುನಾವಣಾ ಅಕ್ರಮ ಕಂಡು ಬಂದಲ್ಲಿ, ಜಸ್ಟ್ ಈ ರೀತಿ ದೂರು ನೀಡಿ

ನಿಮ್ ಏರಿಯಾದಲ್ಲಿ ಚುನಾವಣಾ ಅಕ್ರಮ ಕಂಡು ಬಂದಲ್ಲಿ, ಜಸ್ಟ್ ಈ ರೀತಿ ದೂರು ನೀಡಿ

ಬೆಂಗಳೂರು : ಮತದಾರರನ್ನು ಸೆಳೆಯಲು ಹಣ, ಗಿಫ್ಟ್ ನೀಡಲಾಗುತ್ತಿದ್ಯಾ ? ನಿಮ್ಮ ಏರಿಯಾದಲ್ಲಿ ಚುನಾವಣಾ ಅಕ್ರಮ ಕಂಡು ಬಂದರೆ ಸುಮ್ಮನಿರಬೇಡಿ..ಜಸ್ಟ್ ಈ ರೀತಿ ದೂರು ನೀಡಿ. ಚುನಾವಣಾ ಅಕ್ರಮ ತಡೆಯಲು ಭಾರತದ ಚುನಾವಣಾ ಆಯೋಗವು ಸಿ-ವಿಜಿಲ್ (C-Vigil) ಮೊಬೈಲ್ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಿದ್ದು, ಈ ಮೂಲಕ ನೀವು ದೂರು ಸಲ್ಲಿಸಬಹುದು.

ಸಿ-ವಿಜಿಲ್ ಆಪ್ ಎಲ್ಲಿ ಸಿಗುತ್ತದೆ..?

ಮೊದಲು ಗೂಗಲ್ ಪ್ಲೇಸ್ಟೋರ್ ಅಥವಾ ಆಪಲ್ ಆಪ್ ಸ್ಟೋರ್ನಿಂದ ಸಿ-ವಿಜಿಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಬಹುದು. ನೀವು ಸಾಕ್ಷಿಯಾಗಿರುವ ಯಾವುದೇ ಚುನಾವಣಾ ಸಂಬಂಧಿತ ಉಲ್ಲಂಘನೆಗಳ ಫೆÇೀಟೋಗಳು ಅಥವಾ ವೀಡಿಯೊಗಳನ್ನು ಸೆರೆಹಿಡಿಯಿರಿ. ನಿಮ್ಮ ವರದಿಯನ್ನು ಅಪ್ಲಿಕೇಶನ್ ಮೂಲಕ ಅಪ್ಲೋಡ್ ಮಾಡಿ, ಘಟನೆ ಮತ್ತು ಸ್ಥಳದ ವಿವರಗಳನ್ನು ಒದಗಿಸಿ. ನಿಮ್ಮ ವರದಿಯನ್ನು ಕ್ರಮಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ತ್ವರಿತವಾಗಿ ರವಾನಿಸಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

*ಸಿ-ವಿಜಿಲ್ ಆಪ್ ಹೇಗೆ ಕೆಲಸ ಮಾಡುತ್ತದೆ..?

ಆಪ್ ಓಪನ್ ಮಾಡಿದಾಗ ನಿಮ್ಮ ಹೆಸರು ಹಾಗೂ ಮೊಬೈಲ್ ಸಂಖ್ಯೆಯ ಹಾಕಿ ರಿಜಿಸ್ಟರ್ ಮಾಡಿಕೊಳ್ಳಬೇಕು. ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಹಣ, ಮದ್ಯ, ಉಡುಗೊರೆಗಳನ್ನು ಹಂಚುವ ಸಂದರ್ಭದಲ್ಲಿ ಸಾರ್ವಜನಿಕರು ಫೋಟೋ ಮತ್ತು ವಿಡಿಯೋವನ್ನು (2 ನಿಮಿಷ) ಸೆರೆಹಿಡಿದು ಈ ಆಪ್ನಲ್ಲಿ ಅಪ್ಲೋಡ್ ಮಾಡಬಹುದು. ಅಲ್ಲಿನ ವಿಳಾಸವನ್ನು ನಮೂದಿಸಬೇಕು. ಜೊತೆಗೆ ಇದು ಸಂಪೂರ್ಣ ಉಚಿತವಾಗಿರಲಿದೆ. ಆಪ್ನಲ್ಲಿ ದಾಖಲಿಸುವ ದೂರುಗಳ ಬಗ್ಗೆ ಜಿಲ್ಲಾ ಮಟ್ಟದ ಸಿ-ವಿಜಿಲ್ ನೋಡೆಲ್ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ. ಸಾರ್ವಜನಿಕರ ದೂರುಗಳಿಗೆ 100 ನಿಮಿಷಗಳ ಒಳಗೆ ಅಧಿಕಾರಿಗಳ ಉತ್ತರ ಸಿಗಲಿದೆ. ಇದರಿಂದ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರು ಆಮಿಷಗಳು ಸಾಕ್ಷಿ ಸಮೇತ ದಾಖಲಾಗಲಿವೆ.ದೂರಿನೊಂದಿಗೆ ಸೆರೆಹಿಡಿಯಲಾದ ಜಿಪಿಎಸ್ ಮಾಹಿತಿಯು ಅದನ್ನು ಸಂಬಂಧಪಟ್ಟ ಜಿಲ್ಲಾ ನಿಯಂತ್ರಣ ಕೊಠಡಿಗೆ ಸ್ವಯಂಚಾಲಿತವಾಗಿ ಫ್ಲಾಗ್ ಮಾಡುತ್ತದೆ. ಫ್ಲೈಯಿಂಗ್ ಸ್ಕ್ವಾಡ್ ತಂಡಗಳನ್ನು ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ರವಾನಿಸಲು ಅನುವು ಮಾಡಿಕೊಡುತ್ತದೆ.

ಏನೆಲ್ಲಾ ದೂರು ನೀಡಬಹುದು?

ವ್ಯಕ್ತಿಯೊಬ್ಬರು ನಿರ್ದಿಷ್ಟ ವ್ಯಕ್ತಿ ಅಥವಾ ಪಕ್ಷಕ್ಕೆ ಹಣ ವಿತರಣೆ ಮಾಡಿದರೆ, ಉಡುಗೋರೆ, ಮದ್ಯ ಹಂಚಿಕೆ, ಅನುಮತಿ ಪಡೆಯದೇ ಬ್ಯಾನರ್ ಅಥವಾ ಪೆÇೀಸ್ಟರ್, ಬೆದರಿಕೆ ಹಾಕುವುದು, ಬಂದೂಕು ಪ್ರದರ್ಶನ, ಧಾರ್ಮಿಕ ಅಥವಾ ಕೋಮು ಕುರಿತು ಪ್ರಚೋದಾರಿತ ಭಾಷಣ, ಮತಗಟ್ಟೆಯ 200 ಮೀಟರ್ ಪ್ರದೇಶದಲ್ಲಿ ನಿμÉೀಧದ ಅವಧಿಯಲ್ಲೂ ಪ್ರಚಾರ, ಮತದಾನದ ದಿನದಂದು ಮತದಾರರನ್ನು ಸಾಗಿಸುವುದು.. ಹೀಗೆ ಯಾವುದೇ ರೀತಿ ಅಕ್ರಮ ಚಟುವಟಿಕೆಗಳು ಕಂಡು ಬಂದಲ್ಲಿ ಈ ಆಪ್ನಲ್ಲಿ ದೂರು ಕೊಡಬಹುದು. ಒಟ್ಟು 16 ರೀತಿಯ ದೂರುಗಳನ್ನು ನೀಡಬಹುದು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular