‘ವಲಸೆ ಯಾಕ್ರಿ ನಿಮ್ಮೂರಲ್ಲೇ ಉದ್ಯೋಗ ಖಾತ್ರಿ’ : ನಾಳೆಯಿಂದ ನರೇಗಾ ಕೂಲಿ 349 ರಿಂದ 370 ಕ್ಕೆ ಹೆಚ್ಚಳ.!

ಡಿಜಿಟಲ್ ಡೆಸ್ಕ್ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಯಲ್ಲಿ 2025 ಏಪ್ರಿಲ್ 01 ರಿಂದ ದಿನದ ಕೂಲಿ ಮೊತ್ತವನ್ನು ರೂ. 349 ರಿಂದ 370ಕ್ಕೆ ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಮಹಾತ್ಮಗಾಂಧಿ ನರೇಗಾ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಇನ್ನು ಮುಂದೆ ನರೇಗಾ ಕೂಲಿಕಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಲಾಗಿದೆ.

ನರೇಗಾ ಯೋಜನೆಯಲ್ಲಿ ಹೆಣ್ಣು ಮತ್ತು ಗಂಡಿಗೆ ಸಮಾನ ಕೂಲಿ ಅಂದರೆ ಒಂದು ದಿನದ ಕೂಲಿಗೆ ರೂ 370 ಪಡೆಯುವ ಹಕ್ಕಿದ್ದು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಲಾಗಿದೆ.

ಒಂದು ಆರ್ಥಿಕ ವರ್ಷದಲ್ಲಿ ಒಂದು ಕುಟುಂಬಕ್ಕೆ ಕನಿಷ್ಠ 100 ದಿನಗಳ ಕೂಲಿ ದೊರೆಯುವಂತೆ ಮಾಡುವುದು ಹಾಗೂ 65 ವರ್ಷ ಮೇಲ್ಪಟ್ಟ ವೃದ್ಧರಿಗೆ ಮತ್ತು ವಿಶೇಷಚೇತನರಿಗೆ ಕೆಲಸದಲ್ಲಿ ಶೇ.50 ವಿನಾಯಿತಿ ನೀಡಲಾಗಿದೆ.
ಅರ್ಹ ಫಲಾನುಭವಿಗಳ ಒಂದು ಕುಟುಂಬಕ್ಕೆ ಜೀವಿತಾವಧಿಯಲ್ಲಿ ವೈಯಕ್ತಿಕ ಸೌಲಭ್ಯದಡಿ ರೂ.5 ಲಕ್ಷದ ವರೆಗೆ ವೈಯಕ್ತಿಕ ಕಾಮಗಾರಿ ಪಡೆದುಕೊಳ್ಳಲು ಅವಕಾಶವಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ವೈಯಕ್ತಿಕ ಕಾಮಗಾರಿ ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಲು ನರೇಗಾ ಯೋಜನೆ ಸಹಕಾರಿಯಾಗಿದೆ.ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕೆಲಸಕ್ಕಾಗಿ ಅಥವಾ ಸಹಾಯಕ್ಕಾಗಿ ಪಂಚಮಿತ್ರ ಸಹಾಯವಾಣಿ ಸಂಖ್ಯೆ – 8277506000 ಕರೆಮಾಡಿ ಸಹಾಯವಾಣಿ ಮೂಲಕ ತಕ್ಷಣವೇ ಪರಿಹಾರ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read