ಇಟ್ಟರೆ ಸಗಣಿಯಾದೆ, ತಟ್ಟಿದರೆ ಕುರುಳಾದೆ..ನೀವಾರಿಗಾದಿರೋ ಬಿಜೆಪಿ ಸಂಸದರೇ? : ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ

ಬೆಂಗಳೂರು : ಇಟ್ಟರೆ ಸಗಣಿಯಾದೆ ತಟ್ಟಿದರೆ ಕುರುಳಾದೆ, ಸುಟ್ಟರೇ ನೊಸಲಿಗೆ ವಿಭೂತಿಯಾದೆ ತಟ್ಟದೇ ಹಾಕಿದರೆ ಮೇಲುಗೊಬ್ಬರವಾದೆ, ಆದರೆ ನೀವಾರಿಗಾದಿರೋ ಬಿಜೆಪಿ ಸಂಸದರೇ? ಹೀಗಂತ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ಲೇವಡಿ ಮಾಡಿದ್ದಾರೆ.

ಇಟ್ಟರೆ ಸಗಣಿಯಾದೆ ತಟ್ಟಿದರೆ ಕುರುಳಾದೆ, ಸುಟ್ಟರೇ ನೊಸಲಿಗೆ ವಿಭೂತಿಯಾದೆ ತಟ್ಟದೇ ಹಾಕಿದರೆ ಮೇಲುಗೊಬ್ಬರವಾದೆ, ಆದರೆ ನೀವಾರಿಗಾದಿರೋ ಬಿಜೆಪಿ ಸಂಸದರೇ? ನೆರೆ ಬಂದಾಗ ಯಡಿಯೂರಪ್ಪನವರು ವೇದಿಕೆ ಮೇಲೆಯೇ ನೆರೆ ಪರಿಹಾರಕ್ಕೆ ಪ್ರಧಾನಿಗೆ ಆಗ್ರಹಿಸಿದ್ದಾಗಲೂ ಬಿಜೆಪಿ ಸಂಸದರು ಕರ್ನಾಟಕದ ಪರ ಬಾಯಿ ಬಿಡಲಿಲ್ಲ.GST ಪರಿಹಾರ, ವಿಶೇಷ ಅನುದಾನದಲ್ಲಿನ ಅನ್ಯಾಯದ ಕುರಿತು ಬೊಮ್ಮಾಯಿಯವರು ಮಾತಾಡಿದಾಗಲೂ ಬಿಜೆಪಿ ಸಂಸದರು ಬಾಯಿ ಬಿಡಲಿಲ್ಲ. ಕೇಂದ್ರ ಬಜೆಟ್ನಲ್ಲಿ ಕರ್ನಾಟಕವನ್ನು ಕಡೆಗಣಿಸಿದಾಗಲೂ ಬಿಜೆಪಿ ಸಂಸದರು ತುಟಿ ಬಿಚ್ಚಲಿಲ್ಲ.

ಕೋವಿಡ್ ಸಮಯದಲ್ಲಿ ಆಕ್ಸಿಜನ್, ರೆಮಿಡಿಸಿವಿರ್, ವ್ಯಾಕ್ಸಿನ್ ಹಂಚಿಕೆಯಲ್ಲಿ ರಾಜ್ಯವನ್ನು ಕಡೆಗಣಿಸಿದಾಗಲೂ ಬಿಜೆಪಿ ಸಂಸದರು ಮಾತಾಡಲಿಲ್ಲ.ಯಾವುದೇ ವಿಷಯದಲ್ಲೂ ಕರ್ನಾಟಕದ ಪರವಾಗಿ ಸಂಸದರ ನಿಯೋಗ ಕೇಂದ್ರ ಸರ್ಕಾರವನ್ನು ಭೇಟಿಯಾದ ಉದಾಹರಣೆಯೇ ಇಲ್ಲ.ಈಗ ಭೀಕರ ಬರ ಎದುರಿಸುತ್ತಿರುವ ರಾಜ್ಯಕ್ಕೆ ಬರ ಪರಿಹಾರ ಕೇಳುವುದಕ್ಕೂ ಬಿಜೆಪಿ ಸಂಸದರ ಧ್ವನಿ ಇಲ್ಲ. ಜಗತ್ತಿನಲ್ಲಿ ಪ್ರತಿ ವಸ್ತುವೂ ಒಂದಿಲ್ಲೊಂದು ಉಪಯೋಗಕ್ಕೆ ಬರುತ್ತವೆ, ಆದರೆ ಯಾವುದೇ ಪ್ರಯೋಜನಕ್ಕೆ ಬಾರದ ಬಿಜೆಪಿ ಸಂಸದರು ಕನ್ನಡಿಗರ ಪಾಲಿಗೆ ಇದ್ದೂ ಇಲ್ಲದಂತಿರುವ ನಿರುಪಯೋಗಿ ಜೀವಿಗಳು! ಎಂದು ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ಲೇವಡಿ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read