ʻದ್ವಿತೀಯ PUC ಪರೀಕ್ಷೆ-1ʼ : ಕರ್ತವ್ಯಕ್ಕೆ ಹಾಜರಾಗುವ ಸಿಬ್ಬಂದಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಮಾರ್ಚ್-2024ರ ದ್ವಿತೀಯ ಪಿ.ಯು.ಸಿ ಪರೀಕ್ಷೆ-1 ಕ್ಕೆ ಸಂಬಂಧ ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ನಿರ್ವಹಿಸಬೇಕಾದ ಕರ್ತವ್ಯಗಳ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ.

ಮಾರ್ಚ್ 2024ರ ದ್ವಿತೀಯ ಪಿ.ಯು.ಸಿ ಪರೀಕ್ಷೆ-1 ನ್ನು ಸುಗಮವಾಗಿ ನಡೆಸುವುದು ಆಯಾ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಸಹ ಮುಖ್ಯ ಅಧೀಕ್ಷಕರುಗಳ ಆದ್ಯ ಕರ್ತವ್ಯವಾಗಿರುತ್ತದೆ. ಮುಖ್ಯ ಅಧೀಕ್ಷಕರು, ಸಹ ಮುಖ್ಯ ಅಧೀಕ್ಷಕರುಗಳು ಸೂಚಿಸುವ ಕಾರ್ಯಗಳನ್ನು ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಕಟ್ಟುನಿಟ್ಟಾಗಿ ನಿರ್ವಹಿಸುವುದು.

ಪರೀಕ್ಷಾ ಕೇಂದ್ರಗಳಲ್ಲಿ ಮುಖ್ಯ ಅಧೀಕ್ಷಕರು, ಸಹ ಮುಖ್ಯ ಅಧೀಕ್ಷಕರುಗಳು ಹಾಗೂ ಇತರೆ ಅಧಿಕಾರಿ ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ನಿರ್ವಹಿಸಬೇಕಾದ ಕಾರ್ಯಗಳನ್ನು ಮತ್ತು ಪಾಲಿಸಬೇಕಾದ ಅಂಶಗಳನ್ನು ಈ ಕೆಳಗೆ ಪಟ್ಟಿ ಮಾಡಲಾಗಿದೆ. ಸದರಿ ಅಂಶಗಳನ್ನು ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಕಟ್ಟುನಿಟ್ಟಾಗಿ ಪಾಲಿಸುವುದು.

ಪರೀಕ್ಷಾ ಪ್ರವೇಶ ಪತ್ರಗಳ ಬಗ್ಗೆ:

  1. ಮಂಡಲಿಯು ನೀಡಿರುವ ಸುತ್ತೋಲೆಯನ್ವಯ ಪ್ರವೇಶ ಪತ್ರಗಳನ್ನು ಪರಿಶೀಲಿಸಿ ವಿತರಿಸುವುದು.
  2. ನಿಗದಿತ ದಿನಾಂಕ 27-02-2024 ರೊಳಗೆ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರಗಳನ್ನು ವಿತರಿಸುವುದು.
  3. ನಿಗದಿತ ದಿನಾಂಕದೊಳಗೆ ಅರ್ಹ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರಗಳನ್ನು ವಿತರಿಸದಿದ್ದಲ್ಲಿ ಸಂಬಂಧಪಟ್ಟ ಪ್ರಾಂಶುಪಾಲರ ವಿರುದ್ಧ ಮಂಡಲಿಯ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲಾಗುವುದು.
  4. ಪರೀಕ್ಷಾ ಸಿದ್ದತೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅಗತ್ಯ ಸೂಚನೆಗಳನ್ನು ನೀಡುವುದು.
  5. ಪರೀಕ್ಷಾ ಕೊಠಡಿಯಲ್ಲಿ ವಿದ್ಯಾರ್ಥಿ ತನ್ನ ಜೊತೆಯಲ್ಲಿ ಪರೀಕ್ಷೆ ಬರೆಯಲು ಬೇಕಾಗುವ ಅಗತ್ಯ ವಸ್ತುಗಳ ಬಗ್ಗೆ ಮಾಹಿತಿ ಮತ್ತು ಸೂಚನೆ ನೀಡುವುದು.
  6. ಮೊಬೈಲ್ ಫೋನ್/ಎಲೆಕ್ಟ್ರಾನಿಕ್ ಉಪಕರಣಗಳ ನಿಷೇಧದ ಬಗ್ಗೆ ಮಾಹಿತಿ ನೀಡುವುದು.
  7. ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಯಲ್ಲಿ ಕಡ್ಡಾಯವಾಗಿ ಪೂರ್ಣಾವಧಿ (3 ಗಂಟೆ 15 ನಿ/ 2 ಗಂಟೆ 15 ನಿಮಿಷ) ಹಾಜರಿರುವಂತೆ ಸೂಚಿಸುವುದು.
  8. ಪರೀಕ್ಷಾ ಕೊಠಡಿಯಿಂದ ಪರೀಕ್ಷಾ ಅವಧಿಗೆ ಮುನ್ನ ಹೊರಡುವ ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆ ನೀಡುವುದಿಲ್ಲ. ಪರೀಕ್ಷೆ ಮುಗಿದ ನಂತರ ಪ್ರಶ್ನೆಪತ್ರಿಕೆಯನ್ನು ಪಡೆದುಕೊಳ್ಳಲು ಸೂಚಿಸುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read