ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ರಾಜ್ಯಾದ್ಯಂತ ಮಾರ್ಚ್ 01 ರಿಂದ 22 ರವರೆಗೆ ನಡೆಯಲಿರುವ 2024ರ ದ್ವಿತೀಯ ಪಿ.ಯು.ಸಿ ಪರೀಕ್ಷೆ-1 ರ ವಾರ್ಷಿಕ ಪರೀಕ್ಷೆಗಳ ನಿಮಿತ್ತ ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ 1973 ರ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಬೆಂಗಳೂರು ರವರು 2024ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆ-1 ರ ವಾರ್ಷಿಕ ಪರೀಕ್ಷೆಗಳನ್ನು ನಡೆಸಲಿದ್ದು, ಮಾರ್ಚ್ 01 ರಿಂದ 22 ರವರೆಗೆ ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 01.30 ಗಂಟೆಯವರೆಗೆ ಪರೀಕ್ಷೆಗಳು ನಡೆಯಲಿವೆ. ಈ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರ, ಅಕ್ರಮ ನಡೆಯದಂತೆ ಷರತ್ತಿಗೊಳಪಟ್ಟು ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

ಆದೇಶದನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಪತ್ರ ಪಡೆದ ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ. ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ಕಾಪಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ. 200 ಮೀಟರ್ ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ, ಕೆಎಸ್‌ ಆರ್‌ ಟಿಸಿ ಬಸ್‌ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಮಾರ್ಚ್‌ 1 ರಿಂದ ಮಾರ್ಚ್‌ 22 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಈ ಅವಧಿಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬಿಎಂಟಿಸಿ, ಕೆಎಸ್‌ ಆರ್‌ ಟಿಸಿಯ ನಗರ, ಹೊರ ವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ

ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ (ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯ)

01-03-2024 ರ ಶುಕ್ರವಾರ ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ

04-03-2024 ಸೋಮವಾರ ಗಣಿತ ಪರೀಕ್ಷೆ

05-03-2024 ರಂದು ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ

06-03-2024 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್,ಪರೀಕ್ಷೆ

07-03-2024 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ

09-03-2024 ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ ಪರೀಕ್ಷೆ

11-03-2024 ರಂದು ತರ್ಕಶಾಸ್ತ್ರ,ವ್ಯವಹಾರ ಅಧ್ಯಯನ ಪರೀಕ್ಷೆ

13-03-2024 ರಂದು ಇಂಗ್ಲಿಷ್ ಪರೀಕ್ಷೆ

15-03-2024 ರಂದು ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ

16-03-2024 ರಂದು ಅರ್ಥಶಾಸ್ತ್ರ ಪರೀಕ್ಷೆ

18-03-2024 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ

20-03-2024 ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ

22-03-2024 ರಂದು ಹಿಂದಿ ಪರೀಕ್ಷೆ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read