HomeLatest NewsBREAKING: ಜನವರಿ 6ರಂದು ಡಿ.ಕೆ.ಶಿವಕುಮಾರ್ ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಾರೆ: ಮತ್ತೆ ಪುನರುಚ್ಛರಿಸಿದ ಶಾಸಕ ಇಕ್ಬಾಲ್...

BREAKING: ಜನವರಿ 6ರಂದು ಡಿ.ಕೆ.ಶಿವಕುಮಾರ್ ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಾರೆ: ಮತ್ತೆ ಪುನರುಚ್ಛರಿಸಿದ ಶಾಸಕ ಇಕ್ಬಾಲ್ ಹುಸೇನ್

ರಾಮನಗರ: ಡಿಸಿಎಂ ಡಿ.ಕೆ.ಶಿವಕುಮಾರ್ ಜನವರಿ 6 ಅಥವಾ 9ರಂದು ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡುತ್ತಾರೆ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಪುನರುಚ್ಛರಿಸಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಸಾಕ ಇಕ್ಬಾಲ್ ಹುಸೇನ್, ಜನವರಿ 6 ಅಥವಾ 9ಕ್ಕೆ ಡಿ.ಕೆ.ಶಿವಕುಮಾರ್ ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಾರೆ. ಇದು ನಾನು ಹೇಳುತ್ತಿರುವ ಮಾತಲ್ಲ, ಶರಣರು ಹೇಳಿರುವುದು. ಅವರ ಮಾತುಗಳನ್ನು ಕೇಳಿ ನಾನು ಹೇಳುತ್ತಿದ್ದೇನೆ ಎಂದಿದ್ದಾರೆ.

200 ಪರ್ಸೆಂಟ್ ಈ ಎರಡು ಡೇಟ್ ಗಳಲ್ಲಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕರಿಸುತ್ತಾರೆ. ಈಗಲೂ ಸಹ ನನ್ನ ಮಾತಿಗೆ ನಾನು ಬದ್ಧನಾಗಿದ್ದೇನೆ. ನನಗೆ ವಿಶ್ವಾಸವಿದೆ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆಂದು. ಶರಣರು ಹೇಳಿದ ಮಾತುಗಳು ಸತ್ಯವಾಗುತ್ತವೆ. ಅಧಿಕಾರ ಹಂಚಿಕೆ ಬಗ್ಗೆ ನಮ್ಮ ನಾಯಕರು ಹೇಳಿದ್ದಾರಲ್ವಾ? ಹಾಗಾಗಿ ನನಗೆ ಈ ಬಗ್ಗೆ ನಂಬಿಕೆ ಇದೆ. ಭಗವಂತ ನಮ್ಮ ಬೇಡಿಕೆ ಈಡೇರಿಸುತ್ತಾನೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular