HomeLatest NewsBIG NEWS: ಅಧಿವೇಶನ ಮುಗಿದ ಬಳಿಕ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರೆ: ಶಾಸಕ ಇಕ್ಬಾಲ್ ಹುಸೇನ್

BIG NEWS: ಅಧಿವೇಶನ ಮುಗಿದ ಬಳಿಕ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರೆ: ಶಾಸಕ ಇಕ್ಬಾಲ್ ಹುಸೇನ್

ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗೇ ಆಗ್ತಾರೆ. ಅಧಿವೇಶನ ಮುಗಿಯುತ್ತಿದ್ದೆಂತೆ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಇಕ್ಬಾಲ್ ಹುಸೇನ್, ಡಿ.ಕೆ.ಶಿವಕುಮಾರ್ ಕಷ್ಟಪಟ್ಟಿದ್ದಕ್ಕೆ ಫಲ ಸಿಕ್ಕೇ ಸಿಗುತ್ತದೆ. ಅಧಿವೇಶನ ಮುಗಿದ ಬಳಿಕ ಆ ಫಲ ಸಿಗುತ್ತದೆ. ನಂಬರ್ ಮುಖ್ಯವಲ್ಲ, ಹೈಕಮಾಂಡ್ ನಿರ್ದೇಶನ ಮುಖ್ಯ. ಹೈಕಮಾಂಡ್ ನಾಯಕರು ತೀರ್ಮಾನಿಸಬೇಕು ಎಂದರು.

ಸಂಕ್ರಾಂತಿಯಲ್ಲ, ಅಧಿವೇಶನ ಮುಗಿಯುತ್ತಿದ್ದಂತೆ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ. ಗುರುವಾಅರ ನಾವು 55 ಶಾಸಕರು ಊಟಕ್ಕೆ ಸೇರಿದ್ದೆವು. ಊಟ ಮಾಡಿದ್ದೇವೆ ಅಷ್ಟೆ. ನಮಗೆ ಡಿ.ಕೆ.ಶಿವಕುಮಾರ್ ಸಿಎಂ ಅಗಬೇಕು. ಆಗ್ತಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular