HomeKarnatakaBREAKING : ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣ; KPSC ಮಾಜಿ ಅಧ್ಯಕ್ಷ 'ಶಿವಶಂಕರಪ್ಪ ಸಾಹುಕಾರ್' ED...

BREAKING : ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣ; KPSC ಮಾಜಿ ಅಧ್ಯಕ್ಷ ‘ಶಿವಶಂಕರಪ್ಪ ಸಾಹುಕಾರ್’ ED ವಶಕ್ಕೆ

ಬೆಂಗಳೂರು: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಕರ್ನಾಟಕ ಹಾಗೂ ಗುಜರಾತ್‌ನಲ್ಲಿ ಏಕಕಾಲದಲ್ಲಿ ಮೆಗಾ ದಾಳಿ ನಡೆಸಿದ್ದಾರೆ. ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸ ಸೇರಿದಂತೆ ಹಲವು ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ಈ ಬೆನ್ನಲ್ಲೇ ವಿಚಾರಣೆಗೆ ಸಹಕರಿಸದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಹಾಗೂ ಅವರ ಬಳಿಯಿಂದ ಮೊಬೈಲ್ ಕೂಡ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸಕ್ಕೆ 10ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಸಿಆರ್‌ಪಿಎಫ್ ಸಿಬ್ಬಂದಿಯ ಭದ್ರತೆಯಲ್ಲಿ ತೆರಳಿ ಪರಿಶೀಲನೆ ನಡೆಸಿದ್ದಾರೆ. ವಿಚಾರಣೆಗೆ ಸಹಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

21ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ

ಕೆಪಿಎಸ್‌ಸಿ ಕಚೇರಿ, ಕೆಪಿಎಸ್‌ಸಿ ಸದಸ್ಯೆ ಶಾಂತಾ ಹೊಸಮನಿ, ‘M/s ಎಡುಟೆಸ್ಟ್ ಸೊಲ್ಯೂಷನ್ಸ್’ ಸಂಸ್ಥೆ, ಮಧ್ಯವರ್ತಿಗಳು ಹಾಗೂ ಆಯ್ಕೆಯಾದ ಕೆಲ ಅಭ್ಯರ್ಥಿಗಳ ಮನೆಗಳ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರು ಮಾತ್ರವಲ್ಲದೆ ಹಾಸನ, ದಾವಣಗೆರೆ, ಚಿತ್ರದುರ್ಗ, ಬೆಳಗಾವಿ, ರಾಯಚೂರು, ಕಾರವಾರ, ಕಲಬುರಗಿ ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳು ಹಾಗೂ ಗುಜರಾತ್‌ನ ಅಹಮದಾಬಾದ್‌ನಲ್ಲೂ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಒಟ್ಟು 21 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.

₹70-80 ಲಕ್ಷ ಲಂಚ ಪಡೆದ ಆರೋಪ

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅಭ್ಯರ್ಥಿಗಳಿಂದ ತಲಾ ₹70ರಿಂದ ₹80 ಲಕ್ಷದವರೆಗೆ ಲಂಚ ಪಡೆದಿರುವ ಆರೋಪ ಕೇಳಿಬಂದಿತ್ತು. ಅಲ್ಲದೆ, ಉತ್ತರ ಪತ್ರಿಕೆಗಳನ್ನು ತಿದ್ದುವುದು ಹಾಗೂ ಕೆಪಿಎಸ್‌ಸಿ ಅಧಿಕಾರಿಗಳ ಸಂಬಂಧಿಕರಿಗೆ ಅಕ್ರಮವಾಗಿ ಹುದ್ದೆ ಕೊಡಿಸಿರುವ ಆರೋಪವೂ ಪ್ರಕರಣದಲ್ಲಿದೆ.

ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ನಾಲ್ಕು ಪ್ರತ್ಯೇಕ FIRಗಳು ದಾಖಲಾಗಿದ್ದವು. ಪ್ರಕರಣದ ತನಿಖೆಯ ಭಾಗವಾಗಿ ಇದೀಗ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಪುತ್ರಿಯರ ನೇಮಕಾತಿ ಆರೋಪ

ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ಪುತ್ರಿಯರ ಅಕ್ರಮ ನೇಮಕಾತಿಗೆ ನೆರವಾದ ಆರೋಪವೂ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಜುಲೈ 13ರಂದು ರಾಜ್ಯಪಾಲರು ಅವರನ್ನು ಅಮಾನತುಗೊಳಿಸಿದ್ದರು.

ಕೆಪಿಎಸ್‌ಸಿ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದ ಹಣಕಾಸು ವ್ಯವಹಾರಗಳು ಹಾಗೂ ಅಕ್ರಮದ ಜಾಲದ ಕುರಿತು ಇಡಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular