HomeLatest Newsಅಕ್ರಮ ಆಸ್ತಿ ಸಂಪಾದನೆ ಕೇಸ್: ಸಚಿವ ಜಮೀರ್ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿದ ಲೋಕಾಯುಕ್ತ ಪೊಲೀಸರು

ಅಕ್ರಮ ಆಸ್ತಿ ಸಂಪಾದನೆ ಕೇಸ್: ಸಚಿವ ಜಮೀರ್ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿದ ಲೋಕಾಯುಕ್ತ ಪೊಲೀಸರು

ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿದ್ದಾರೆ.

ನೋಟಿಸ್ ಹಿನ್ನೆಲೆಯಲ್ಲಿ ಲೋಕಾಯುಕ್ತ ಕೇಂದ್ರ ಕಚೇರಿಗೆ ಆಗಮಿಸಿದ ಸಚಿವ ಜಮೀರ್ ಅಹ್ಮದ್ ಖಾನ್ ಅವರು ತನಿಖಾಧಿಕಾರಿ ಹೆಚ್.ಎಂ. ಸತೀಶ್ ಅವರ ಮುಂದೆ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ. ಅಗತ್ಯವಿದ್ದರೆ ಮತ್ತೆ ವಿಚಾರಣೆಗೆ ಬರುವಂತೆ ಸಚಿವರಿಗೆ ಸೂಚಿಸಲಾಗಿದೆ.

ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ ಜಮೀರ್ ಅಹ್ಮದ್, ನಾನು ಕಾನೂನು ಬದ್ಧವಾಗಿ ಹಣಕಾಸು ವ್ಯವಹಾರ ನಡೆಸಿದ್ದೇನೆ. ಅನೇಕ ವರ್ಷಗಳಿಂದ ಸಾರಿಗೆ ಉದ್ಯಮದಲ್ಲಿ ತೊಡಗಿದ್ದೇನೆ. ಆದರೆ, ಅಕ್ರಮವಾಗಿ ಆಸ್ತಿ ಸಂಪಾದಿಸಿಲ್ಲ. ನನ್ನ ಮೇಲೆ ಸುಖಾಸುಮ್ಮನೆ ಆರೋಪ ಮಾಡಲಾಗಿದೆ. ಪ್ರತಿ ವರ್ಷವೂ ತೆರಿಗೆ ಪಾವತಿಸಿದ್ದೇನೆ. ಚುನಾವಣೆ ವೇಳೆ ಎಲ್ಲಾ ವಿವರ ನೀಡಿದ್ದೇನೆ ಎಂದು ಲೋಕಾಯುಕ್ತಕ್ಕೆ ವಿವರಣೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಮೀರ್ ಅಹಮದ್ ಖಾನ್ ಅವರೊಂದಿಗಿನ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ನಟಿ ರಾಧಿಕಾ ಕುಮಾರಸ್ವಾಮಿ, ಉದ್ಯಮಿ ಕೆಜಿಫ್ ಬಾಬು ವಿಚಾರಣೆ ನಡೆಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular