ಅಕ್ರಮವಾಗಿ ಆಸ್ತಿ ಸಂಪಾದಿಸಿದ ಅಧಿಕಾರಿಗೆ ಬಿಗ್ ಶಾಕ್: ಆಸ್ತಿಗಿಂತ ಎರಡು ಪಟ್ಟು ದಂಡ, 5 ವರ್ಷ ಕಠಿಣ ಶಿಕ್ಷೆ

ತುಮಕೂರು: ಅಕ್ರಮವಾಗಿ ಆಸ್ತಿ ಸಂಪಾದಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಹಿಂದಿನ ಅಧಿಕಾರಿಯೊಬ್ಬರಿಗೆ 2.32 ಕೋಟಿ ರೂ. ದಂಡ, 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಮಂಗಳವಾರ ಆದೇಶ ಹೊರಡಿಸಿದೆ.

ಸಮಾಜ ಕಲ್ಯಾಣ ಇಲಾಖೆ ಹಿಂದಿನ ಜಂಟಿ ನಿರ್ದೇಶಕ ಆರ್. ಸುಬ್ರಹ್ಮಣ್ಯ ಶಿಕ್ಷೆಗೆ ಒಳಗಾದವರು. 2016ರಲ್ಲಿ ಎಸಿಬಿ ಪೊಲೀಸರು ತುಮಕೂರಿನ ಕುವೆಂಪು ನಗರದ ಮನೆ, ಕಚೇರಿ ಮತ್ತಿತರ ಸ್ಥಳಗಳಲ್ಲಿ ದಾಳಿ ನಡೆಸಿದ್ದರು. ಸುಬ್ರಹ್ಮಣ್ಯ ಮತ್ತು ಅವರ ಕುಟುಂಬದವರ ಹೆಸರಿನಲ್ಲಿ 1.21 ಕೋಟಿ ರೂ. ಆಸ್ತಿಯನ್ನು ಅಕ್ರಮವಾಗಿ ಸಂಪಾದಿಸಿರುವುದು ಪತ್ತೆಯಾಗಿದ್ದು, ನಂತರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.

ಲೋಕಾಯುಕ್ತ ವಿಶೇಷ ನ್ಯಾಯಾಲಯ ನ್ಯಾಯಾಧೀಶ ಟಿ.ಪಿ. ರಾಮಲಿಂಗೇಗೌಡ ಅವರು ವಿಚಾರಣೆ ನಡೆಸಿದ್ದು, ಆರೋಪಿ ಸುಬ್ರಹ್ಮಣ್ಯ ಮತ್ತು ಕುಟುಂಬದವರು ನಿಗದಿತ ಆದಾಯಕ್ಕಿಂತ 1.16 ಕೋಟಿ ರೂ. ಆಸ್ತಿಯನ್ನು ಅಕ್ರಮವಾಗಿ ಸಂಪಾದಿಸಿರುವುದು ದೃಢಪಟ್ಟಿದೆ ಅಕ್ರಮವಾಗಿ ಸಂಪಾದಿಸಿದ ಆಸ್ತಿಯ ಎರಡು ಪಟ್ಟು 2.32 ಕೋಟಿ ರೂಪಾಯಿ ವಸೂಲಿ ಮಾಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಲೋಕಾಯುಕ್ತರ ಪರವಾಗಿ ಎನ್.ಬಿ. ಬಸವರಾಜ್ ವಾದ ಮಂಡಿಸಿದ್ದರು. ಲೋಕಾಯುಕ್ತ ಇನ್ ಸ್ಪೆಕ್ಟರ್ ಗಳಾದ ಹಾಲಪ್ಪ ಮತ್ತು ಜೆ. ರಮೇಶ್ ಕೋರ್ಟ್ ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಸ್ತುತ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಬ್ರಹ್ಮಣ್ಯ ಅವರನ್ನು ವಶಕ್ಕೆ ಪಡೆದು ಜೈಲಿಗೆ ಕಳುಹಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read