HomeKarnatakaBIG NEWS: ಅಕ್ರಮ ಪಟಾಕಿ ದಾಸ್ತಾನುಗಳ ಮೇಲೆ ಪೊಲೀಸರ ದಿಢೀರ್ ದಾಳಿ

BIG NEWS: ಅಕ್ರಮ ಪಟಾಕಿ ದಾಸ್ತಾನುಗಳ ಮೇಲೆ ಪೊಲೀಸರ ದಿಢೀರ್ ದಾಳಿ

ರಾಯಚೂರು: ಅಕ್ರಮ ಪಟಾಕಿ ದಾಸ್ತಾನುಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿರುವ ಘಟನೆ ರಾಯಚೂರು ನಗರದಲ್ಲಿ ನಡೆದಿದೆ.

ಅಕ್ರಮವಾಗಿ ಪಟಾಕಿ ದಾಸ್ತಾನು ಮಾಡಲಾಗಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ರಾಯಚೂರಿನ ಸದರ್ ಬಜಾರ್ ಠಾಣೆ ಪೊಲೀಸರು, ಬೆಸ್ತವಾರಪೇಟೆಯ ರಮೇಶ್ ಮನೆ ಮೇಲೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ 50 ಸಾವಿರ ಮೌಲ್ಯದ ಪಟಾಕಿ ಜಪ್ತಿ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ತುರ್ವಿಹಾಳ ಠಾಣೆ ಪೊಲೀಸರು, ಸಿಂಧನೂರು ತಾಲೂಕಿನ ಗುಂಜಳ್ಳಿ ಗ್ರಾಮದಲ್ಲಿ ದಾಳಿ ನಡೆಸಿದ್ದು ನಾಗರಾಜ್ ಎಂಬುವವರ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 24 ಲಕ್ಷ ರೂಪಾಯಿ ಮೌಲ್ಯದ ವಿವಿಧ ಮಾದರಿಯ ಪಟಾಕಿ ಜಪ್ತಿ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular