HomeKarnatakaBREAKING NEWS: ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ

BREAKING NEWS: ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ

ಬೆಂಗಳೂರು: ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಅವರ ನಿವಾಸ ಸೇರಿ ಅವರಿಗೆ ಸೇರಿದ ಸ್ಥಳಗಳಲ್ಲಿ ಸತತ 48 ಗಂಟೆಗಳ ಕಾಲ ಜಾರಿ ನಿರ್ದೇಶನಾಲಯ ಅಧಿಕಾರಿಗಳು ತಪಾಸಣೆ ನಡೆಸಿದ್ದರು. ಈ ಸಂದರ್ಭದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬ್ಯಾಂಕ್ ಅಧಿಕಾರಿಗಳ ಮುಂದೆ ನಾಗೇಂದ್ರ ಅವರನ್ನು ಕೂರಿಸಿ ವಿಚಾರಣೆ ನಡೆಸಲಾಗಿದ್ದು, ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಗೇಂದ್ರ ಅವರನ್ನು ಇಡಿ ಕಚೇರಿಗೆ ಕರೆತಂದು ಅವರ ವಿಚಾರಣೆ ನಡೆಸಿ ಅಧಿಕೃತವಾಗಿ ಬಂಧಿಸುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular