ಚಿತ್ರದುರ್ಗ: ಅಕ್ರಮ ಮರಳು ಗಣಿಗಾರಿಕೆ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ನಡೆದಿದೆ.
ವೆಂಕಟಾಪುರ ಗ್ರಾಮದ ಜಿನಗಿ ಹಳ್ಳದ ಅಕ್ರಮ ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಲಾಗಿದೆ. ಚಳ್ಳಕೆರೆ ಡಿವೈಎಸ್ ಪಿ ಟಿ.ಬಿ.ರಾಜಣ್ಣ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ದಾಳಿ ವೇಳೆ 2 ಟಿಪ್ಪರ್, 1 ಜೆಸಿಬಿ, ಹಳ್ಳದಲ್ಲಿದ್ದ ಒಂದು ಬೋಟ್ ವಶಕ್ಕೆ ಪಡೆಯಲಾಗಿದೆ. ಪೊಲೀಸರು ದಾಳಿ ನಡೆಸುತ್ತಿದ್ದಂತೆ ಮರಳು ದಂದೆಕೋರರು ಪರಾರಿಯಾಗಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.