ಬೆಂಗಳೂರು: ಬೇಲೇಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರ ಜಾಮೀನು ಅವಧಿ ವಿಸ್ತರಿಸಲಾಗಿದೆ.
ಸತೀಶ್ ಸೈಲ್ ಅವರ ಜಾಮೀನು ಅವಧಿ ವಿಸ್ತರಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಿಸಿದೆ. ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಲಾಗಿತ್ತು. ಆರೋಗ್ಯದ ಸಮಸ್ಯೆ ಹಿನ್ನೆಲೆ ಅವರು ಜಾಮೀನು ಪಡೆದು ಹೊರ ಬಂದಿದ್ದರು. ಅಕ್ಟೋಬರ್ 25 ರವರೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ನೀಡಿತ್ತು. ಜಾಮೀನು ಅವಧಿ ವಿಸ್ತರಿಸುವಂತೆ ಅವರು ಕೋರಿದ್ದ ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯ ನವೆಂಬರ್ 7ರವರೆಗೆ ಜಾಮೀನು ಅವಧಿಯನ್ನು ವಿಸ್ತರಿಸಿ ಆದೇಶಿಸಿದೆ.
