HomeLatest Newsಅದಿರು ಅಕ್ರಮ ಸಾಗಣೆ ಕೇಸ್: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜಾಮೀನು ಅವಧಿ ವಿಸ್ತರಣೆ

ಅದಿರು ಅಕ್ರಮ ಸಾಗಣೆ ಕೇಸ್: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜಾಮೀನು ಅವಧಿ ವಿಸ್ತರಣೆ

ಬೆಂಗಳೂರು: ಬೇಲೇಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರ ಜಾಮೀನು ಅವಧಿ ವಿಸ್ತರಿಸಲಾಗಿದೆ.

ಸತೀಶ್ ಸೈಲ್ ಅವರ ಜಾಮೀನು ಅವಧಿ ವಿಸ್ತರಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಿಸಿದೆ. ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಲಾಗಿತ್ತು. ಆರೋಗ್ಯದ ಸಮಸ್ಯೆ ಹಿನ್ನೆಲೆ ಅವರು ಜಾಮೀನು ಪಡೆದು ಹೊರ ಬಂದಿದ್ದರು. ಅಕ್ಟೋಬರ್ 25 ರವರೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ನೀಡಿತ್ತು. ಜಾಮೀನು ಅವಧಿ ವಿಸ್ತರಿಸುವಂತೆ ಅವರು ಕೋರಿದ್ದ ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯ ನವೆಂಬರ್ 7ರವರೆಗೆ ಜಾಮೀನು ಅವಧಿಯನ್ನು ವಿಸ್ತರಿಸಿ ಆದೇಶಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular