HomeKarnatakaBIG NEWS: ಅಕ್ರಮ ಸಂಬಂಧಕ್ಕೆ ಅಡ್ಡಿ; ಮಹಿಳೆಯ ಪತಿಯನ್ನು ಹತ್ಯೆಗೈದಿದ್ದ ಆರೋಪಿ ಅರೆಸ್ಟ್

BIG NEWS: ಅಕ್ರಮ ಸಂಬಂಧಕ್ಕೆ ಅಡ್ಡಿ; ಮಹಿಳೆಯ ಪತಿಯನ್ನು ಹತ್ಯೆಗೈದಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ತಿಲಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ತಬ್ರೇಜ್ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಶಬ್ಬೀರ್ ಬಂಧಿತ ಆರೋಪಿ. ಶ್ರೀರಾಂಪುರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ತಿಲಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಕ್ರಮ ಸಂಬಂಧಕ್ಕೆ ಅಡ್ಡಿ ಬರುತ್ತಿದ್ದ ಮಹಿಳೆಯ ಪತಿ ತಬ್ರೇಜ್ ನನ್ನು ಶಬ್ಬೀರ್ ಎರಡು ದಿನಗಳ ಹಿಂದೆ ಕೊಲೆ ಮಾಡಿದ್ದ. ಅಕ್ರಮ ಸಂಬಂಧ ವಿಚಾರವಾಗಿ ತಬ್ರೇಜ್ ಹಾಗೂ ಶಬ್ಬೀರ್ ನಡುವೆ ಗಲಾಟೆಯಾಗಿ ರಾಜಿ ಸಂಧಾನ ಮಾಡಲಾಗಿತ್ತು. ಆದರೂ ಮಹಿಳೆಯನ್ನು ಬಿಡದ ಶಬ್ಬೀರ್ ಆಕೆಯನ್ನು ಕರೆದೊಯ್ದಿದ್ದ. ತಾಯಿಯ ಅಕ್ರಮ ಸಂಬಂಧದ ಬಗ್ಗೆ ಮಕ್ಕಳು ಕೂಡ ತಬ್ರೇಜ್ ಗೆ ಪದೇ ಪದೇ ಹೇಳುತ್ತಿದ್ದರು. ಇದರಿಂದ ಕೋಪಗೊಂಡ ತಬ್ರೇಜ್, ತಿಲಕನಗರ ಮಸೀದಿ ಬಳಿ ಶಬ್ಬೀರ್ ಜೊತೆ ಜಗಳವಾಡಿದ್ದ. ಈ ವೇಳೆ ಶಬ್ಬೀರ್ ಮಾರಕಾಸ್ತ್ರಗಳಿಂದ ತಬ್ರೇಜ್ ನನ್ನು ಹತ್ಯೆ ಮಾಡಿ ಎಸ್ಕೇಪ್ ಆಗಿದ್ದ.

ತಿಲಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿ ಶಬ್ಬೀರ್ ನನ್ನು ಪೊಲೀಸರು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular